ಮಂಗಳೂರು:ಚೆಕ್​ಬೌನ್ಸ್​ ಕೇಸ್​ನಲ್ಲಿ ಹಲವು ಬಾರಿ ಸಮನ್ಸ್​ ಪಡೆಯದೆ ತಪ್ಪಿಸಿಕೊಂಡಿದ್ದ ಕನ್ನಡ ಚಿತ್ರರಂಗ ಪೋಷಕ ನಟಿ, ಕಿರುತೆರೆ ನಿರ್ದೇಶಕಿ ಪದ್ಮಜಾ ರಾವ್‌, ನಿನ್ನೆ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗುತ್ತಿದ್ದಂತೆ ಇಂದು ಬೆಳಗ್ಗೆ ಕೋರ್ಟ್​ಗೆ ಹಾಜರ್​ ಆದರು.
ನಟ, ನಿರ್ದೇಶಕ ವಿರೇಂದ್ರ ಶೆಟ್ಟಿ ಒಡೆತನದ ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ನೀಡಿದ್ದ 40 ಲಕ್ಷ ರೂ. ಮೌಲ್ಯದ ಚೆಕ್​ ಬೌನ್ಸ್‌ ಪ್ರಕರಣದಲ್ಲಿ ಪದ್ಮಜಾ ರಾವ್ ವಿರುದ್ಧ ಮಂಗಳೂರಿನ ಜೆಎಂಎಫ್‌ಸಿ ಐದನೇ ನ್ಯಾಯಾಲಯ ಗುರುವಾರ ವಾರಂಟ್‌ ಜಾರಿ ಮಾಡಿತ್ತು. ಪದ್ಮಜಾ ರಾವ್ ಅವರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ವಾರಂಟ್​ ಆದೇಶದ ಪ್ರತಿಯನ್ನು ಬೆಂಗಳೂರಿನ ತಲಘಟ್ಟಪುರ ಪೊಲೀಸ್‌ ಠಾಣೆಗೆ ರವಾನಿಸಲಾಗಿತ್ತು.ಇದನ್ನೂ ಓದಿರಿVideo| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ
ಮರುದಿನವೇ ಮಂಗಳೂರಿನ 5ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಹಾಜರ್​ ಆದ ನಟಿ ಪದ್ಮಜಾ ರಾವ್​, ನ್ಯಾಯಾಲಯಕ್ಕೆ ಬಾಂಡ್ ನೀಡಿ ಜಾಮೀನು ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಟಿ, ನನಗೆ ನಮ್ಮ ಕಾನೂನು ಮತ್ತು ನ್ಯಾಯಾಲಯದ ಮೇಲೆ ಸಂಪೂರ್ಣ ಭರವಸೆ ಇದೆ. ನನ್ನ ಮೇಲೂ ನನಗೆ ಪೂರ್ಣ ಭರವಸೆ ಇದೆ. ಈ ಪ್ರಕರಣದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ನಿವೆಲ್ಲಾ ಕಾದು ನೋಡಬೇಕು ಎಂದರು.
ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

Video| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 2 =
Remember me
