ಕಲಬುರಗಿ:ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ನಡೆಸಿದ ಅಕ್ರಮಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಸೇರಿ ಆರು ಆರೋಪಿಗಳಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ.
ಆರೋಪಿಗಳಾದ ದಿವ್ಯಾ ಹಾಗರಗಿ, ಮಂಜುನಾಥ್, ಕಾಶೀನಾಥ್, ರವೀಂದ್ರ, ಶಾಂತಿಬಾಯಿ, ಅರ್ಚನಾ ಅವರನ್ನು ಬಂಧಿಸುವಂತೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಕಲಬುರಗಿಯ ಮೂರನೇ ಜೆಎಂಎಫ್​ಸಿ ಕೋರ್ಟ್​ನಿಂದ ಈ ಅರೆಸ್ಟ್ ವಾರಂಟ್ ಜಾರಿಗೊಳಿಸಲಾಗಿದೆ.
ತನಿಖಾ ಅವಧಿಯಲ್ಲಿಯೇ ಆರೋಪಿಗಳಿಗೆ ಅರೆಸ್ಟ್ ವಾರಂಟ್ ಜಾರಿಯಾಗಿರುವ ಇದು ಕರ್ನಾಟಕದಲ್ಲೇ ಅಪರೂಪದ ಪ್ರಕರಣ ಎನ್ನಲಾಗಿದೆ. ಮುಂಬೈ ಬಾಂಬ್ ಬ್ಲಾಸ್ಟ್ ಸಂದರ್ಭದಲ್ಲಿ ದಾವೂದ್ ಇಬ್ರಾಹಿಂ ಬಂಧನಕ್ಕೂ ಇಂಥದ್ದೇ ಅರೆಸ್ಟ್ ವಾರೆಂಟ್ ಜಾರಿಯಾಗಿತ್ತು. ದಾವೂದ್​ ಪ್ರಕರಣವನ್ನು ಉಲ್ಲೇಖಿಸಿ ಸಿಐಡಿ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕೋರ್ಟ್ ಈ ಅರೆಸ್ಟ್​ ವಾರಂಟ್ ಜಾರಿಗೊಳಿಸಿದ್ದು, ಒಂದು ವಾರದೊಳಗಾಗಿ ಬಂಧಿಸುವಂತೆ ಆದೇಶಿಸಿದೆ.
ರಾಜಸ್ಥಾನ ಪೊಲೀಸರ ಮನಗೆದ್ದ ‘ಕೆಜಿಎಫ್​-2’ ‘ವಯಲೆನ್ಸ್​’!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
