ಬೆಂಗಳೂರು:ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಆಕೆಯ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿದ್ದು, ಸದ್ಯ ನ್ಯಾಯಾಲಯವು ಪವಿತ್ರಾರನ್ನು ಜೈಲಿಗೆ ಕಳುಹಿಸಿದೆ. ಇದೀಗ ದರ್ಶನ್​ರನ್ನು ಮಾತ್ರ ಎರಡು ದಿನಗಳ ಕಾಲ ಕಸ್ಟಡಿಗೆ ಕೋರ್ಟ್​ ಆದೇಶದಂತೆ ಕಸ್ಟಡಿಗೆ ಪಡೆದಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಕೊಲೆಗೆ ಸಂಬಂಧಿಸಿದ ಸಾಕ್ಷ್ಯ ನಾಶಪಡಿಸಲು ದರ್ಶನ್​ ತಮ್ಮ ಸ್ನೇಹಿತರಿಂದ ಹಣ ಪಡೆದಿರುವ ಬಗ್ಗೆ ಮಾಹಿತಿ ಲಭಿಸಿದೆ.
ಇದನ್ನೂ ಓದಿ:ಶತಕ ಬಾರಿಸಿದ ಟೊಮ್ಯಾಟೊ ದರ
ಪ್ರಕರಣದ ತನಿಖೆ ಕೈಗೊಂಡಿರುವ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಆರೋಪಿ ದರ್ಶನ್ ತೂಗುದೀಪ​​ ಅವರು ಕೊಲೆಗೆ ಸಂಬಂಧಿಸಿದ ಸಾಕ್ಷ್ಯ ನಾಶಪಡಿಸಲು ಇತರ ಆರೋಪಿಗಳಿಗೆ ತನ್ನ ಸ್ನೇಹಿತರೊಬ್ಬರಿಂದ 40 ಲಕ್ಷ ರೂಪಾಯಿ ಸಾಲ ಪಡೆದಿದ್ದರು ಎಂಬುದು ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯಿಂದ ಬೆಳಕಿಗೆ ಬಂದಿದೆ. ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ನಟ ಈ ವಿಷಯವನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಸಾಕ್ಷ್ಯ ನಾಶಪಡಿಸಲು ತಮ್ಮ ಸ್ನೇಹಿತರಿಂದ ಹೆಚ್ಚುವರಿಯಾಗಿ 40 ಲಕ್ಷ ರೂ. ಹಣವನ್ನು ಪಡೆದಿರುವುದಾಗಿ ದರ್ಶನ್ ಒಪ್ಪಿಕೊಂಡಿದ್ದು, ಅದಕ್ಕೂ ಮುನ್ನ ಇತರರಿಗೆ ಶರಣಾಗಲು 30 ಲಕ್ಷ ರೂ. ನೀಡಿರುವುದು ಬೆಳಕಿಗೆ ಬಂದಿದೆ. ರೇಣುಕಸ್ವಾಮಿಯನ್ನು ಕೊಲೆಗೈದು, ಶವ ವಿಲೇವಾರಿ ಮಾಡಲು ಹಾಗೂ ಸಾಕ್ಷ್ಯ ನಾಶಪಡಿಸಲು ದರ್ಶನ್ 30 ಲಕ್ಷ ರೂ.ಗಳನ್ನು ನೀಡಿರುವುದಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಕೆಲ ಆರೋಪಿಗಳು ಈ ಹಿಂದೆ ತಪ್ಪೊಪ್ಪಿಕೊಂಡಿದ್ದರು.
ಇದನ್ನೂ ಓದಿ:ಅಮಿತಾಭ್ ಗೆಸ್ಚರ್ ನೋಡಿ ಅಶ್ವಿನಿದತ್ ಭಾವುಕ..ಇಷ್ಟಕ್ಕೂ ‘ಕಲ್ಕಿ’ ಪ್ರೀ-ರಿಲೀಸ್ ಸಮಾರಂಭದಲ್ಲಿ ನಡೆದಿದ್ದೇನು?
ತನಿಖಾ ವರದಿಯ ಪ್ರಕಾರ, ಹತ್ಯೆಯ ಹೊಣೆಗಾರಿಕೆಯನ್ನು ಸ್ವತಃ ತಮ್ಮ ಮೇಲೆ ಎಳೆದುಕೊಳ್ಳಲು ಸಹ ಹಣವನ್ನು ಪಡೆದಿದ್ದರು. ಇದೀಗ 40 ಲಕ್ಷ ರೂ. ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಸಾಲ ನೀಡಿದ ವ್ಯಕ್ತಿಯನ್ನು ನಟನ ಸ್ನೇಹಿತ ಮೋಹನ್ ರಾಜ್ ಎಂದು ಗುರುತಿಸಲಾಗಿದೆ. ದರ್ಶನ್ ಹೇಳಿಕೆ ಆಧರಿಸಿ ಪೊಲೀಸ್ ರಿಮಾಂಡ್ ಅರ್ಜಿಯಲ್ಲಿ ಈ ಮಾಹಿತಿ ಸೇರಿಸಲಾಗಿದೆ ಎಂದು ‘ಇಂಡಿಯಾ ಟುಡೇ’ ತನ್ನ ವರದಿಯಲ್ಲಿ ಉಲ್ಲೇಖಿಸಿದೆ,(ಏಜೆನ್ಸೀಸ್).
ದರ್ಶನ್​ ಮೇಲಿನ ಕೊಲೆ ಆರೋಪಕ್ಕೆ ಎಚ್​ಡಿಕೆ ಕಾರಣ ಎಂದ ಮಹಿಳಾ ಅಭಿಮಾನಿ​ ವಿರುದ್ಧ ದೂರು ದಾಖಲು

ಅಂದು ಅಪ್ಪು ಮತ್ತು ಸುದೀಪ್​ ಸರ್​​ ಹಲ್ಲುಕಚ್ಚಿಕೊಂಡು ಸುಮ್ಮನಿದ್ರು: ನಿರ್ಮಾಪಕ ಉಮಾಪತಿ ಸ್ಪೋಟಕ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 10 =
Remember me
