ಹಾಸನ:ಬಿಜೆಪಿಯಿಂದ ಟಿಕೆಟ್​ ನಿರೀಕ್ಷೆಯಲ್ಲಿದ್ದ ಬಿ.ಎಸ್​. ಯಡಿಯೂರಪ್ಪ ಅವರ ಪರಮಾಪ್ತ ಎನ್​.ಆರ್​. ಸಂತೋಷ್​ಗೆ ನಿರಾಶೆಯಾಗಿದ್ದು, ಜೆಡಿಎಸ್​ನತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಪೂರಕವಾಗಿ ಸಂತೋಷ್​ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ.
ಸಂತೋಷ್​ ಅವರು ಅರಸೀಕೆರೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಟಿಕೆಟ್​ ನೀಡದೇ ಇರುವುದರಿಂದ ಆಕ್ರೋಶಗೊಂಡಿರುವ ಎನ್​.ಆರ್​. ಸಂತೋಷ್​, ಜೆಡಿಎಸ್​ ಸೇರ್ಪಡೆಯಾಗುವ ಸಾಧ್ಯತೆ ಇದೆ. ಎಚ್​.ಡಿ. ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ:ಕಾಡಾನೆ ದಾಳಿಯಿಂದ ಬೈಕ್​ ಸವಾರರು ಜಸ್ಟ್​ ಮಿಸ್​: ಲಾರಿ ಚಾಲಕನ ಸಮಯ ಪ್ರಜ್ಞೆಗೆ ಸಲಾಂ
ಅರಸೀಕೆರೆ ಕ್ಷೇತ್ರದ ಜೆಡಿಎಸ್​ ಶಾಸಕರಾಗಿದ್ದ ಶಿವಲಿಂಗೇಗೌಡ ಜೆಡಿಎಸ್​ ತೊರೆದು ಕಾಂಗ್ರೆಸ್​​ ಸೇರ್ಪಡೆಯಾಗಿದ್ದಾರೆ. ಇದೀಗ ಅರಸೀಕೆರೆ ಕ್ಷೇತ್ರದಲ್ಲಿ ಹೊಸ ಜೆಡಿಎಸ್​ ಅಭ್ಯರ್ಥಿಯ ಅವಶ್ಯಕತೆ ಇದೆ. ಹೀಗಾಗಿ ಎನ್​.ಆರ್​. ಸಂತೋಷ್​ ಅವರನ್ನು ಜೆಡಿಎಸ್​ ಪರಿಗಣಿಸುತ್ತದೆಯೇ? ಎಂಬುದನ್ನು ಕಾದು ನೋಡಬೇಕಿದೆ.
ಈಗಾಗಲೇ ಬಿಜೆಪಿ ಪಾಳಯದಲ್ಲಿ ಬಂಡಾಯದ ಬಿಸಿ ಜೋರಾಗಿದೆ. ಟಿಕೆಟ್​ ಮಿಸ್​ ಆಗದ್ದಕ್ಕೆ ಅನೇಕ ನಾಯಕರು ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿ ಬೇರೆ ಪಕ್ಷಗಳತ್ತ ಮುಖ ಮಾಡಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ನಿನ್ನೆಯಷ್ಟೇ ಜೆಡಿಎಸ್​ ಸೇರಿದ್ದಾರೆ. ಅಲ್ಲದೆ, ಬಿಜೆಪಿ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಕಾಂಗ್ರೆಸ್​ ಸೇರ್ಪಡೆಗೊಂಡಿದ್ದಾರೆ. ಹೀಗೆ ಸಾಕಷ್ಟು ಮಂದಿ ಜೆಡಿಎಸ್​ ಮತ್ತು ಕಾಂಗ್ರೆಸ್​ ಕಡೆ ಮುಖ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​​)
ಎರಡು ಬಾರಿ ಹೃದಯಾಘಾತದಿಂದ ಪಾರಾಗಿದ್ದ ಕಾಂಗ್ರೆಸ್​ನ ಮಾಜಿ ಶಾಸಕ 3ನೇ ಬಾರಿ ವಿಧಿವಶ

ರಿಷಿಕಾ ಈಗ ‘ಓಕೆ ಮಗಾ’!

ಫ್ಯಾನ್ಸಿ ನಂಬರ್ 1111​ಗಾಗಿ 5 ಲಕ್ಷ ರೂ. ವ್ಯಯಿಸಿದ ನಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 4 =
Remember me
