ಶಿರಸಿ:ಚುನಾವಣೆ ಘೋಷಣೆಯಾದ ಬಳಿಕ ಪಕ್ಷಾಂತರ ಹೆಚ್ಚಾಗಿದೆ. ಜೆಡಿಎಸ್‌ನ ಶಾಸಕ ಕೆ. ಎಂ. ಶಿವಲಿಂಗೆ ಗೌಡ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಶಿರಸಿಯ ಗೃಹ ಕಚೇರಿಯಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿದ ಅರಸೀಕರೆಯ ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೆ ಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಇದನ್ನೂ ಓದಿ:ಭೀಕರ ಅಪಘಾತ; ಅಂತರಾಷ್ಟ್ರೀಯ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಮೃತ್ಯು
ಅರಸೀಕರೆಯಲ್ಲಿ ಕಳೆದ ತಿಂಗಳು ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ನಡೆದಿತ್ತು. ಪಕ್ಷದ ಚಟುವಟಿಕೆಗಳಿಂದ ದೂರ ಇದ್ದ ಅರಸೀಕರೆಯ ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೆ ಗೌಡ ಸಮಾವೇಶದಲ್ಲಿ ಪಾಲ್ಗೊಂಡಿರಲಿಲ್ಲ. ಕೆಲವು ದಿನಗಳಿಂದ ಅವರು ಜೆಡಿಎಸ್ ತೊರೆಯಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದೀಗ ರಾಜೀನಾಮೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಗುಂಡಿನ ದಾಳಿ: ಬಿಜೆಪಿ ನಾಯಕನ ಹತ್ಯೆಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್. ಆರ್. ಶ್ರೀನಿವಾಸ್. ಅರಕಲಗೂಡು ಕ್ಷೇತ್ರದ ಶಾಸಕ ಎ. ಟಿ. ರಾಮಸ್ವಾಮಿ ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷ ತೊರೆದಿದ್ದಾರೆ. ಕರ್ನಾಟಕದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಮೇ 10ರ ಬುಧವಾರ ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
VIDEO | ಸ್ಪಾರ್ಕಲ್ ಗನ್ ಹಿಡಿದು ಪೋಸ್​​​ ಕೊಟ್ಟ ನವ ದಂಪತಿ; ಮುಂದೇನಾಯ್ತು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
