ಬೆಂಗಳೂರು: ಎಲ್ಲರ ಹೃದಯ ಲಬ್ ಡಬ್ ಅಂದರೆ ಇಲ್ಲೊಬ್ಬ ವ್ಯಕ್ತಿಯ ಹೃದಯವು ಎಲೆಕ್ಟ್ರಿಕ್ ಮಷಿನ್​ನಿಂದ ಮಾಡಲಾಗಿದೆ.  ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆರ್ಟಿಫಿಶಿಯಲ್ ಹಾರ್ಟ್ ಅಳವಡಿಕೆ ಮಾಡಲಾಗಿದ್ದು, ವೈದ್ಯಕೀಯ ಲೋಕದಲ್ಲಿ ಅಚ್ಚರಿಯ ಬೆಳವಣಿಗೆಯಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ವ್ಯಕ್ತಿಯೊಬ್ಬರಿಗೆ ಕೃತಕ ಅಳವಡಿಸಲಾಗಿದೆ. ಕೃತಕ ಹೃದಯ (‌ಥರ್ಡ್ ಜನರೇಶನ್​​ ಎಲ್​ಬಿಯನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ಮೂಲದ ವ್ಯಕ್ತಿಗೆ ಹೃದಯ ರೋಗ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಕೃತಕ ಹೃದಯ ಅಳವಡಿಕೆ ಮಾಡಲಾಗಿದೆ.  ಇದು ರಾಜ್ಯದ ಮೊದಲ 3rd ಜನೆರೇಶನ್ ಎಲ್ ಬಿ ಯಶಸ್ವಿ ಕೃತಕ ಹೃದಯ ಕಸಿ ಚಿಕಿತ್ಸೆ ಆಗಿದೆ.
ದುರ್ಬಲವಾಗಿದ್ದ ಹೃದಯವನ್ನು ಬದಲಿಸಿ ಕೃತಕ ಹೃದಯವನ್ನು ವೈದ್ಯರು ಅಳವಡಿಕೆ ಮಾಡಿದ್ದಾರೆ. ಅಂದಹಾಗೇ ಈ ಕೃತಕ ಮಷಿನ್ ಬ್ಲೆಡ್ ಪಂಪ್ ಮಾಡುತ್ತದೆ. ಬ್ಯಾಗ್‍ನಲ್ಲಿರುವ ಬ್ಯಾಟರಿಗಳು, ಎಲೆಕ್ಟ್ರಿಕ್ ಮೋಟರ್ ಮತ್ತು ಟ್ಯೂಬ್‍ಗಳ ಮೂಲಕ ಗಾಳಿಯನ್ನು ಪಂಪ್ ಮಾಡುತ್ತದೆ. ಅದು ಕೃತಕ ಹೃದಯದ ಕೋಣೆಗಳಿಗೆ ಶಕ್ತಿ ನೀಡುತ್ತದೆ. ಈ ಮೂಲಕ ದೇಹದಲ್ಲೆಲ್ಲಾ ರಕ್ತ ಸಂಚಾರಗೊಳ್ಳುತ್ತದೆ. ಹೀಗಾಗಿ ಹೃದಯ ಇಲ್ಲದೆಯೂ ಕೃತಕ ಹೃದಯದ ಮೂಲಕ ಜೀವನ ಪೂರ್ತಿ ಬದುಕು ಸಾಗಿಸುವ ಶಕ್ತಿ ನೀಡಲಾಗಿದೆ.
ಈ ಚಿಕಿತ್ಸೆಗೆ 1 ಕೋಟಿ 10 ಲಕ್ಷ ರೂ. ಖರ್ಚು ಆಗಿದೆ. ರಾಜ್ಯದಲ್ಲಿಯೇ ಮೊದಲ 3rd ಜನರೇಶನ್ ಕೃತಕ ಹೃದಯ ಅಳವಡಿಕೆ ಮಾಡಿರುವ ಖ್ಯಾತಿಯು ಹೃದಯ ಶಸ್ತ್ರಚಿಕಿತ್ಸಾ ತಜ್ಞ ಡಾ.ಅಶ್ವಿನಿ ಕುಮಾರ್ ಅವರಿಗೆ ಸಲ್ಲುತ್ತದೆ.
“ಕಾಟೇರ” ಚಿತ್ರ ತಂಡ ಪಾರ್ಟಿ ಕೇಸ್; ನಟ ದರ್ಶನ್ ಸೇರಿ 8 ಮಂದಿಗೆ ರಿಲೀಫ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 5 =
Remember me
