ಬೆಂಗಳೂರು:ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ, ಇತ್ತೀಚೆಗೆ ‘ಪೇ ಸಿಎಂ’ ಎಂಬ ಅಭಿಯಾನ ಮಾಡಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರ ಫೋಟೋ ಹಾಗೂ ಕ್ಯೂಆರ್​ ಕೋಡ್​ ಪ್ರಕಟಿಸಿ ನಗರದ ವಿವಿಧ ಭಾಗಗಳಲ್ಲಿ ಪೋಸ್ಟರ್​ ಅಂಟಿಸಿತ್ತು.
ಕಾಂಗ್ರೆಸ್​​ ಮಾಡಿದ ಪೇ ಸಿಎಂ ಅಭಿಯಾನ ರಾಜ್ಯದಲ್ಲಿ ಸಂಚಲನವನ್ನೇ ಎಬ್ಬಿಸಿತ್ತು. ಬೆಂಗಳೂರಿನಲ್ಲಿ ಆರಂಭವಾದ ಕ್ಯಾಂಪೇನ್​, ರಾಜ್ಯದ ವಿವಿಧ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ ಅಭಿಯಾನ ಮಾಡಿ, ಬಿಜೆಪಿ ಸರ್ಕಾರವನ್ನು ಟೀಕಿಸಿದ್ದರು.
ಕಳೆದ ತಿಂಗಳು ಮುಕ್ತಾಯವಾದ ಅಧಿವೇಶನದಲ್ಲೂ ಪೇ ಸಿಎಂ ವಿಚಾರವಾಗಿ ಆರೋಪ, ಪ್ರತ್ಯಾರೋಪಗಳು ನಡೆದಿದ್ದವು. ಕಾಂಗ್ರೆಸ್​ನ ಈ ಅಭಿಯಾನ ಬಿಜೆಪಿ ಸರ್ಕಾರಕ್ಕೆ ಹಾಗೂ ಸಿಎಂ ಬೊಮ್ಮಾಯಿ ಅವರಿಗೆ ತೀವ್ರ ಮುಜುಗರ ತಂದಿತ್ತು.ಇದೀಗ ಕಾಂಗ್ರೆಸ್​ನ ಪೇ ಸಿಎಂ ಅಭಿಯಾನ ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದೆ. ಪೋಸ್ಟರ್​ ಅಂಟಿಸುವವರೆಗೆ ಗೃಹ ಇಲಾಖೆ ಹಾಗೂ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು? ಇಂತಹ ಕೃತ್ಯಕ್ಕೆ ಅವಕಾಶ ಮಾಡಿಕೊಡಬಾರದಿತ್ತು. ಪೇ ಸಿಎಂ ಅಭಿಯಾನದಿಂದ ಸರ್ಕಾರಕ್ಕೆ ತೀವ್ರ ಮುಜುಗರವಾಗಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗರಂ ಆಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + sixteen =
Remember me
