ಬೆಂಗಳೂರು:ಬಿಜೆಪಿ ಕಾರ್ಯಕರ್ತರಲ್ಲಿ ಹುರುಪು ತುಂಬಿ ಮುಂಬರುವ ಚುನಾವಣೆಗೆ ಸಜ್ಜುಗೊಳಿಸಲು ಉದ್ದೇಶಿತ ಸಂಘಟನಾ ಪ್ರವಾಸಕ್ಕೆ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಧುಮುಕಲಿದ್ದಾರೆ.
ದೆಹಲಿಯಿಂದ ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಶನಿವಾರ, ಧಾರವಾಡ ಜಿಲ್ಲೆಯಲ್ಲಿ ಭಾನುವಾರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರ ಪಕ್ಷದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ಕಾರ್ಯಕ್ರಮ ಮುಗಿದ ಬಳಿಕ ಅಂದೇ ಸಂಜೆ ಬೆಳಗಾವಿಯಿಂದ ದೆಹಲಿಗೆ ಮರು ಪ್ರಯಾಣ‌ ಬೆಳೆಸಲಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಿಷನ್‌ 150 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಪಕ್ಷ ರಣತಂತ್ರ‌ರೂಪಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಒಳಗೊಂಡ ತಂಡವು ಜನಸಂಕಲ್ಪ ರಾಜಕೀಯ ಯಾತ್ರೆ, ಪಕ್ಷದ ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಉಸ್ತುವಾರಿ ಒಳಗೊಂಡ ತಂಡವು ಸಂಘಟನಾ ಪ್ರವಾಸ ಕೈಗೊಳ್ಳಲಿದೆ.
ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ನಾಲ್ಕೈದು ಜಿಲ್ಲೆಗಳಲ್ಲಿ ಪ್ರವಾಸ ಮುಗಿಸಿದ್ದರೆ, ಸಿಎಂ ಬೊಮ್ಮಾಯಿ‌, ಮಾಜಿ ಸಿಎಂ ಬಿಎಸ್ ವೈ ಮೊದಲ ಹಂತದ ಯಾತ್ರೆ ಪೂರ್ಣಗೊಳಿಸಿದ್ದಾರೆ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೊದಲ ಬಾರಿಗೆ ಸಂಘಟನಾ ಪ್ರವಾಸದಲ್ಲಿ ಭಾಗವಹಿಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + sixteen =
Remember me
