ಬೆಂಗಳೂರು:ಇಂದು ಸಂಜೆ ಬೆಂಗಳೂರಿನಲ್ಲಿ ಸಿಎಎ ಮತ್ತು ಎನ್​ಆರ್​ಸಿ ವಿರೋಧಿಸಿ ಪ್ರತಿಭಟನೆ ನಡೆಯಲಿದ್ದು ಈ ಪ್ರತಿಭಟನೆಯಲ್ಲಿ ಸಂಸದ ಅಸಾದುದ್ದೀನ್​ ಓವೈಸಿ ಮತ್ತು ಮಾಜಿ ಪ್ರಧಾನಿ ಎಚ್​.ಡಿ.ದೇವೆಗೌಡರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್​ ಖಡಕ್​ ಎಚ್ಚರಿಕೆ ನೀಡಿದ್ದಾರೆ.
ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಬಂದಿರುವ ಅಸಾದುದ್ದೀನ್​ ಓವೈಸಿ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿರುವುದರ ಕುರಿತಾಗಿ ಎಚ್ಚರಿಕೆ ನೀಡಿರುವ ಭಾಸ್ಕರ್​ ರಾವ್​, “ಎಲ್ಲರಿಗೂ ವಾಕ್​ ಸ್ವಾತಂತ್ರ್ಯ ಇದೆ. ವಾಕ್​ ಸ್ವಾತಂತ್ರ್ಯದ ಜತೆ ವಾಕ್​ ಜವಾಬ್ದಾರಿಯೂ ಇರಬೇಕು. ಪ್ರತಿಭಟನೆಯಲ್ಲಿ ಏನೇ ಸಂಭವಿಸಿದರೂ ಅದಕ್ಕೆ ಪ್ರತಿಭಟನೆಯ ಆಯೋಜಕರೇ ಹೊಣೆ” ಎಂದು ಹೇಳಿದ್ದಾರೆ.
ಇಂದು ನಡೆಯಲಿರುವ ಪ್ರತಿಭಟನೆಗೆ ಎಲ್ಲಾ ರೀತಿಯ ಪೂರ್ವಭಾವಿ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + two =
Remember me
