ಬೀದರ್:ಕಾರು ಪಲ್ಟಿಯಾಗಿ ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಅಶೋಕ್ ಖೇಣಿ ಅವರ ಸಹೋದರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 51ರಲ್ಲಿ ನಡೆದಿದೆ.
ಇಂದು ಚುನಾವಣೆ ಹಿನ್ನೆಲೆಯಲ್ಲಿ ಅದರ ಅವಸರದಲ್ಲಿದ್ದಾಗ ಸಂಜಯ್​ ಖೇಣಿ ಅವರು ಪ್ರಯಾಣಿಸುತ್ತಿದ್ದ ಫಾರ್ಚೂನರ್​ ಕಾರು ಪಲ್ಟಿ ಹೊಡೆದಿದೆ. ಗಾಯಗೊಂಡಿರುವ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಜೆಡಿಎಸ್ ಅಭ್ಯರ್ಥಿ ಬೆಂಬಲಿಗ ಹಾಗೂ ಬೈರತಿ ಸುರೇಶ್ ನಡುವೆ ಮಾತಿನ ಚಕಮಕಿ!
ರಾಜ್ಯದಲ್ಲಿ ಮತದಾನ ಚುರುಕಾಗಿ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಶೇ. 8.02 ರಷ್ಟು ಮತದಾನ ಆಗಿದೆ. ಈ ಬಗ್ಗೆ ಚುನಾವಣಾ ಆಯೋಗ ಅಧಿಕೃತ ಮಾಹಿತಿ ಮಾಹಿತಿ ನೀಡಿದೆ. ಅಂಕಿ-ಅಂಶಗಳನ್ನು ನೋಡಿದರೆ ಈ ಬಾರಿಯ ಮತದಾನಕ್ಕೆ ಉತ್ತಮ ಆರಂಭ ಸಿಕ್ಕಿದೆ.
ಕರ್ನಾಟಕ ವಿಧಾನಸಭೆಯು ಒಟ್ಟು 224 ಸದಸ್ಯ ಬಲವನ್ನು ಹೊಂದಿದ್ದು, ಸರ್ಕಾರ ರಚನೆ ಮಾಡಲು ಯಾವುದೇ ಪಕ್ಷಕ್ಕೆ 113 ಸದಸ್ಯರ ಬಲವುಳ್ಳ ಸ್ಪಷ್ಟ ಬಹುಮತ ಬೇಕಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದ್ದು, ಯಾರು ಕರ್ನಾಟಕದ ಮುಂದಿನ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.(ದಿಗ್ವಿಜಯ ನ್ಯೂಸ್​)
ಮಕ್ಕಳೊಂದಿಗೆ ತೆರಳಿ ಮತ ಚಲಾಯಿಸಿದ ಸಿಎಂ ಬೊಮ್ಮಾಯಿ

ಜೆಡಿಎಸ್ ಅಭ್ಯರ್ಥಿ ಬೆಂಬಲಿಗ ಹಾಗೂ ಬೈರತಿ ಸುರೇಶ್ ನಡುವೆ ಮಾತಿನ ಚಕಮಕಿ!

ನಮ್ಮನ್ನು ನೋಡಿ ಕಲಿಯಿರಿ… ಮತಚಲಾಯಿಸಿದ ಬಳಿಕ ಯುವಕರಿಗೆ ಕರೆ ಕೊಟ್ಟ ಸುಧಾಮೂರ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
