ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈ ಮಧ್ಯೆ ರಾಜಕೀಯ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ.
ಇನ್ನು ರಾಜ್ಯದ ಹೈ ವೋಲ್ಟೇಜ್ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ವರುಣಾದಲ್ಲಿ ಗುರುವಾರ ಬಿಜೆಪಿ ಹಾಗೂ ಕಾಂಗ್ರೆಸ್​ ನಾಯಕರ ನಡುವಿನ ಹೊಡೆದಾಟದ ಕುರಿತು ಪ್ರತಿಕ್ರಿಯಿಸಿದ ಸಚಿವ ಅಶ್ವತ್ಥನಾರಾಯಣ ಸಿಡಿಮಿಡಿಗೊಂಡಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ ಖಂಡನೀಯ. ಕಾಂಗ್ರೆಸ್ ನ ಹತಾಶ ಕೃತ್ಯಗಳಿಗೆ ಪಕ್ಷ ಹೆದರುವುದಿಲ್ಲ, ಬಗ್ಗುವುದಿಲ್ಲ. ವ್ಯವಸ್ಥಿತ ಷಡ್ಯಂತ್ರ ಹೂಡಿ ಕಲ್ಲು ತೂರಾಟ ಮಾಡಿದ್ದಾರೆ. ವಿ.ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ ಕಾರ್ಯಕ್ರಮದಲ್ಲಿ ಗದ್ದಲವೆಬ್ಬಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ಸ್ವಸ್ಥ ಭಾರತಕ್ಕಾಗಿ `ಮನ್ ಕಿ ಬಾತ್’ ಮೂಲಕ ಜನರ ಪ್ರೇರೇಪಣೆ
ಇಂತಹ ಕೃತ್ಯ ಎಸಗಿದವರು ಕಾನೂನು ಪ್ರಕಾರ ತಕ್ಕ ಶಿಕ್ಷೆ ಅನುಭವಿಸಲಿದ್ದಾರೆ‌. ಬಿಜೆಪಿಯೊಡ್ಡಿದ ಸ್ಪರ್ಧೆಗೆ ಕಾಂಗ್ರೆಸ್ ಪಕ್ಷದ ಮತಗಳ ಮೂಲಕ ಉತ್ತರಿಸುವ ಬದಲು ಕಲ್ಲು ತೂರಿ ಬೆದರಿಸಲು ಪ್ರಯತ್ನಿಸಿದೆ. ಸೋಲುವ ಭೀತಿಯಿಂದ ಗೂಂಡಾಗಿರಿ ಪ್ರದರ್ಶಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೊಸ ಶಿಕ್ಷಣ ನೀತಿ ರದ್ದು ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿರುವುದು ಹಾಸ್ಯಾಸ್ಪದ. ಅಧಿಕಾರಕ್ಕೆ ಬರುವುದಿಲ್ಲ. ಎನ್ ಇಪಿ ರದ್ದಾಗುವುದಿಲ್ಲ ಎಂದು ಸಚಿವ ಅಶ್ವತ್ಥನಾರಾಯಣ ವ್ಯಂಗ್ಯವಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
