ಬೆಂಗಳೂರು:ಸ್ಯಾಂಡಲ್​ವುಡ್ ನಟ ​ಪುನೀತ್ ರಾಜ್​ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಅಪ್ಪು ಹುಟ್ಟುಹಬ್ಬವನ್ನು ಅಥವಾ ಅಪ್ಪುಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮವನ್ನು ಮಿಸ್ ಮಾಡಿಕೊಳ್ಳುವುದಿಲ್ಲ. ಆದರೆ ಇಂದು ಪುನೀತ್​ರ ಹುಟ್ಟುಹಬ್ಬಕ್ಕೆ ಅಶ್ವಿನಿ ಅವರು ಗೈರಾಗಿದ್ದರು.

ಹುಟ್ಟುಹಬ್ಬದಂದು ಅಪ್ಪು ಅವರ ಸ್ಮಾರಕಕ್ಕೆ ದೊಡ್ಮನೆಯ ಹಲವು ಸದಸ್ಯರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಅಶ್ವಿನಿ ಅವರ ಅನುಪಸ್ಥಿತಿಯಲ್ಲಿ ಅವರ ಪುತ್ರಿ, ಪೂಜೆ ಕಾರ್ಯಕ್ರಮಗಳನ್ನು ಮಾಡಿದರು. ರಾಘವೇಂದ್ರ ರಾಜ್​ಕುಮಾರ್ ಹಾಗೂ ಅವರ ಕುಟುಂಬದವರು ಕಾರ್ಯಗಳನ್ನು ನೆರವೇರಿಸಿದರು.

ಅಶ್ವಿನಿ ಪುನೀತ್ ರಾಜ್​ಕುಮಾರ್ ಮುಂಬೈಗೆ ತೆರಳಿದ್ದಾರೆ. ದೊಡ್ಮನೆಯ ಕುಲದೇವತೆಯ ಪೂಜೆಗೆ. ದೊಡ್ಮನೆಯ ಕುಲದೇವತೆ ವಜ್ರೇಶ್ವರಿ ದೇವಿಯ ದೇವಾಲಯಕ್ಕೆ ಪುನೀತ್​ರ ಹುಟ್ಟುಹಬ್ಬದ ದಿನದಂದೇ ತೆರಳಿ ವಿಶೇಷ ಪೂಜೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಚಿತ್ರರಂಗದಲ್ಲಿ ದಿಟ್ಟ ಹೆಜ್ಜೆಯೊಂದನ್ನು ಇಡಲು ವಜ್ರೇಶ್ವರಿ ದೇವಿಗೆ ವಿಶೇಷ ಪೂಜೆ ಮಾಡಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಈಗಾಗಲೇ ಪಿಆರ್​ಕೆ ಪ್ರೊಡಕ್ಷನ್ ಹಾಗೂ ಪಿಆರ್​ಕೆ ಆಡಿಯೋಸ್ ಅನ್ನು ನೋಡಿಕೊಳ್ಳುತ್ತಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಇನ್ನು ಮುಂದೆ ವಜ್ರೇಶ್ವರಿ ಕಂಬೈನ್ಸ್ ಅನ್ನೂ ಸಹ ನೋಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಅಪ್ಪು ಹುಟ್ಟುಹಬ್ಬದಂದೇ ವಜ್ರೇಶ್ವರಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸುತ್ತಿದ್ದಾರೆ.
ಬೆಂಗಳೂರಿನಲ್ಲಿಯೇ ಮಗುವಿಗೆ ಜನ್ಮ ನೀಡಲಿದ್ದಾರೆ ದೀಪಿಕಾ ಪಡುಕೋಣೆ

ಫ್ರಿಡ್ಜ್‌ನಲ್ಲಿಟ್ಟ ಕಲ್ಲಂಗಡಿ ಹಣ್ಣು ತಿನ್ನಲೇಬೇಡಿ; ಅನಾರೋಗ್ಯ ಖಂಡಿತಾ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
