ಬೆಂಗಳೂರು:ಕರ್ನಾಟಕ ರತ್ನ, ಪವರ್​​ಸ್ಟಾರ್​ ಡಾ. ಪುನೀತ್​ ರಾಜ್​ಕುಮಾರ್ ಅವರ​ ಅಗಲಿಕೆಯ ನೋವು ಜನರನ್ನು ಇನ್ನೂ ಬಾಧಿಸುತ್ತಿದ್ದು, ಅಪ್ಪು ಸ್ಥಾನವನ್ನು ಅವರ ಪತ್ನಿ ಅಶ್ವಿನಿ ಅವರು ತುಂಬುತ್ತಿದ್ದಾರೆ. ರಾಜ್ಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮ ಹಾಗೂ ಸಿನಿಮಾ ಇವೆಂಟ್​ಗಳಲ್ಲಿ ಅಪ್ಪುಗೆ ತಪ್ಪದೇ ನಮನವನ್ನು ಸಲ್ಲಿಸಲಾಗುತ್ತದೆ. ಅಶ್ವಿನಿ ಅವರು ಮುಖ್ಯ ಅತಿಥಿಯಾಗಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಇದುವರೆಗೂ ಯಾರೊಬ್ಬರ ಬಗ್ಗೆ ಕೆಟ್ಟದಾಗಿ ಮಾತನಾಡದ ಅಶ್ವಿನಿ ಅವರ ಡೀಪ್​ಫೇಕ್​ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಕಿಡಿಗೇಡಿಯೋರ್ವ ಅತಿರೇಕ ಪ್ರದರ್ಶಿಸಿದ್ದಾನೆ.
ಯೋಗೇಂದ್ರ ಪ್ರಸಾದ್​ ಎಂಬ ಟ್ವಿಟರ್​ ಖಾತೆಯಲ್ಲಿ ಡೀಪ್​ಫೇಕ್​ ವಿಡಿಯೋ ಹಂಚಿಕೊಳ್ಳಲಾಗಿದ್ದು, ಗಂಡ ಸತ್ತ ಮು** ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೆ ಬಾಳು ಕೊಡಲು ನಿರ್ಧರಿಸಿದ್ದೇನೆ 29 October 2024 ರಂದು ನಾನು ವಿವಾಹ ವಾಗಲಿದ್ಧೇನೆ ದಯವಿಟ್ಟು ಅಪ್ಪು ಬಾಸ್ ಅಭಿಮಾನಿಗಳು, ರಾಜವಂಶದ ಅಭಿಮಾನಿಗಳು ಎಲ್ಲರೂ ಬಂದು ಆಶೀರ್ವಾದ ಮಾಡಬೇಕು ಎಂದು ನಮ್ಮ ಸವಿನಯ ಆಮಂತ್ರಣ. ಸ್ಥಳ : ಶ್ರೀ ಕಂಠೀರವನಗರ ಸ್ಟುಡಿಯೋಸ್, ನಾರ್ತ್ ವೆಸ್ಟ್ ಬೆಂಗಳೂರು ಎಂದು ಬರೆಯಲಾಗಿದೆ.
ಟ್ವಿಟರ್​ನಲ್ಲಿ ಕೇವಲ 100 ಫಾಲೋವರ್ಸ್​ಅನ್ನು ಹೊಂದಿರುವ ಯೋಗೇಂದ್ರ ಎಂಬ ಹೆಸರಿನ ಈ ವ್ಯಕ್ತಿಯೂ ರಾಜವಂಶದ ಅಭಿಮಾನಿ ಮತ್ತು ಚಿತ್ರನಟ ಹಾಗೂ ರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಳ ಬಿನ್ನಿಪೇಟೆ ಅಧ್ಯಕ್ಷ ಎಂದು ತನ್ನ ಬಯೋನಲ್ಲಿ ಹಾಕಿಕೊಂಡಿದ್ದಾನೆ. ತನ್ನ ಟ್ವಿಟರ್ ಪೋಸ್ಟ್​ಗಳಲ್ಲಿ ಪ್ರತಿಯೊಬ್ಬರ ಕಾಲೆಳೆಯುವ ವಿಚಾರಗಳನ್ನು ಹಾಕಿಕೊಂಡಿದ್ದಾನೆ. ಇತ್ತ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರ ಡೀಪ್​ಫೇಕ್​ ವಿಡಿಯೋ ನೋಡಿ ಕಿಡಿಕಾರಿರುವ ನೆಟ್ಟಿಗರು ಕಠಿಣ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರು ನಗರ ಪೊಲೀಸರನ್ನು ಟ್ಯಾಗ್​ ಮಾಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ನಿಮ್ಮ ಇಲಾಖೆಯಲ್ಲಿ ಕಿಂಚಿತ್ತಾದರೂ ಶಿಸ್ತಿದೆಯೇ; ಸರ್ಕಾರದ ವಿರುದ್ಧ ಶಾಸಕ ಯತ್ನಾಳ್​ ಗರಂ ಆಗಲು ಕಾರಣವೇನು?
17ನೇ ಆವೃತ್ತಿಯ ಐಪಿಎಲ್​ ಆರಂಭಕ್ಕೂ ಮುನ್ನ ನಡೆದ ಆರ್​ಸಿಬಿ ಜೆರ್ಸಿ ಅನಾವರಣ ಕಾರ್ಯಕ್ರಮದಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗೆ ಫ್ರಾಂಚೈಸಿ ವಿಶೇಷ ಗೌರವ ಸಲ್ಲಿಸಿತ್ತು. ಇದಾದ ಬಳಿಕ ನಡೆದ ಪಂದ್ಯಗಳಲ್ಲಿ ಆರ್​ಸಿಬಿ ತಂಡವು ಸರಣಿ ಸೋಲುಗಳನ್ನು ಕಂಡಿತ್ತು. ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಜರ್ಸಿ ಲಾಂಚ್ ಮಾಡಿದ್ದೇ ಕಾರಣ ಎಂದು ಆಗಲೂ ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು. ಈ ವಿಚಾರ ಅಶ್ವಿನಿ ಗಮನಕ್ಕೆ ಬಂದಿತ್ತು. ಏನು ಮಾಡಲು ಆಗಲ್ಲ ಎದುರಿಸಬೇಕು ಎಂದು ಹೇಳಿ ಸುಮ್ಮನಾಗಿದ್ದರು.
ಇದೀಗ ಕಿಡಿಗೇಡಿಯೋರ್ವ ಈ ರೀತಿಯ ಡೀಪ್​​ಫೇಕ್​ ವಿಡಿಯೋ ಹರಿಬಿಟ್ಟಿದ್ದು, ಈ ವಿಡಿಯೋ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ತಲುಪುವ ಮುನ್ನವೇ ಕ್ರಮ ತೆಗೆದುಕೊಳ್ಳಬೇಕು ಎಂದು ಅನೇಕರು ಬೆಂಗಳೂರು ಪೊಲೀಸ್‌, ಸೈಬರ್ ಕ್ರೈಂಗೆ ಟ್ಯಾಗ್ ಮಾಡಿ ಆಗ್ರಹಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 + 10 =
Remember me
