ಮಂಗಳೂರು:ಸಾರ್ವಜನಿಕರು ಕುಸಿದು ಬಿದ್ದು, ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಸಾಯುತ್ತಿರುವ ಪ್ರಕರಣಗಳು ಮುಂದುವರಿದಿದ್ದು, ಇಂದು ಪೊಲೀಸ್ ಅಧಿಕಾರಿಯೊಬ್ಬರು ಕರ್ತವ್ಯದಲ್ಲಿ ಇದ್ದಾಗಲೇ ಕುಸಿದುಬಿದ್ದು ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ಹೃದಯಾಘಾತದಿಂದ ಸಾವಿಗೀಡಾದ ಆರನೇ ತರಗತಿ ವಿದ್ಯಾರ್ಥಿ; 23-24 ವರ್ಷದವರಿಬ್ಬರು ಕೂಡ ಹಾರ್ಟ್​ ಅಟ್ಯಾಕ್​ಗೆ ಬಲಿ
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಉರ್ವ ಮಾರಿಗುಡಿ ನಿವಾಸಿ, ಅಸಿಸ್ಟೆಂಟ್ ಸಬ್ ಇನ್​ಸ್ಪೆಕ್ಟರ್​ ಬಿ.ಯು. ರಾಜೇಶ್ (45) ಸಾವಿಗೀಡಾದವರು. ಇವರು ಇಂದು ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವಿಗೆ ಒಳಗಾಗಿದ್ದರು.
ಇದನ್ನೂ ಓದಿ:ಹೃದಯಾಘಾತ ತಡೆಗಟ್ಟಲು ಇಂತಹ ಆಹಾರ ಸೇವಿಸುವುದು ಒಳ್ಳೆಯದು: ಹಾರ್ವರ್ಡ್ ಅಧ್ಯಯನ
ತಕ್ಷಣ ವಿಶ್ರಾಂತಿ ಪಡೆಯಲೆಂದು ರೆಸ್ಟ್ ರೂಮ್​ಗೆ ತೆರಳಿದ ಅವರು ಅಲ್ಲೇ ಕುಸಿದು ಬಿದ್ದು ಸಾವಿಗೀಡಾಗಿದರು. 1993ನೇ ಬ್ಯಾಚ್ ಪೊಲೀಸ್ ಆಗಿರುವ ರಾಜೇಶ್, ಈ ಹಿಂದೆ ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದರು.
ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
