ಬೆಂಗಳೂರು: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ರಾಜ್ಯದಲ್ಲಿ ಖಾಲಿಯಿರುವ ಗ್ರೂಪ್​ “ಎ’ ಮತ್ತು “ಬಿ’ ವೃಂದದ ಹುದ್ದೆಗಳ ಮಾಹಿತಿ ನೀಡುವಂತೆ ನೀಡುವಂತೆ ಸರ್ಕಾರದ ಇತರೆ ಇಲಾಖೆಗಳಿಂದ ಮಾಹಿತಿ ಕೋರಿದೆ.
ಕರ್ನಾಟಕ ಗೆಜೆಡೆಟ್​ ಪ್ರೊಬೇಷನರ್​ಗಳ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ಗ್ರೂಪ್​ “ಎ’ ಮತ್ತು “ಬಿ’ ವೃಂದದ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆ ಪ್ರತಿ ವರ್ಷ ನಡೆಸಬೇಕಾಗಿದೆ. ಅಲ್ಲದೆ, ಖಾಲಿಯಿರುವ ಹುದ್ದೆಗಳ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್​ಸಿ) ರವಾನಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀದಲ್ಲಿ ಖಾಲಿಯಿರುವ ಹುದ್ದೆಗಳ ಪಟ್ಟಿ ಸಲ್ಲಿಸುವಂತೆ ಒಳಾಡಳಿತ, ಆರ್ಥಿಕ, ಕಂದಾಯ , ಗ್ರಾಮೀಣಾಭಿವೃದ್ಧಿ,ಆಹಾರ ಮತ್ತು ನಾಗರೀಕ ಇಲಾಖೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸೂಚನೆ ನೀಡಿದೆ.
2011ನೇ ಸಾಲಿನ ಹುದ್ದೆಗಳನ್ನು ಹೊರತು ಪಡಿಸಿ ಎಂದು ಸ್ಪಷ್ಟವಾಗಿ ಸೂಚಿಸಿದೆ. ಏಕೆಂದರೆ, 2011ರ ನೇಮಕಾತಿ ಪ್ರಕ್ರಿಯೆ ಇನ್ನೂ ಹೈಕೋರ್ಟ್​ನಲ್ಲಿರುವುದರಿಂದ ಇದನ್ನು ಹೊರತಾಗಿ ಉಳಿದ ಹುದ್ದೆಗಳ ಮಾಹಿತಿ ನೀಡುವಂತೆ ಕೋರಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
