ಬೆಂಗಳೂರು:ಬಹಳಷ್ಟು ನಿರೀಕ್ಷೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಯನ್ನು ಯುವ ನಾಯಕ ಹಾಗೂ ವೀರಶೈವ ಲಿಂಗಾಯತ ಸಮುದಾಯದ ಬಿ.ವೈ.ವಿಜಯೇಂದ್ರ ಮೂಲಕ ವರಿಷ್ಠರು ಭರ್ತಿ ಮಾಡಿದ್ದು, ಈಗ ಪ್ರತಿಪಕ್ಷ ನಾಯಕನ ಆಯ್ಕೆಯತ್ತ ಆಕಾಂಕ್ಷಿಗಳ ಚಿತ್ತ ನೆಟ್ಟಿದೆ.
ಪಕ್ಷದ ಶಾಸಕಾಂಗ ಪಕ್ಷದ ಸಭೆ ನ.17 (ಶುಕ್ರವಾರ)ಕ್ಕೆ ನಿಗದಿಯಾಗಿದ್ದು, ಪ್ರತಿಪಕ್ಷ ನಾಯಕನ ಆಯ್ಕೆ ಈ ಸಭೆ ಪ್ರಧಾನ ಕಾರ್ಯಸೂಚಿಯಾಗಿದೆ. ವಿಧಾನಸಭೆ ಪ್ರತಿಪಕ್ಷ ನಾಯಕನ ಹುದ್ದೆ ಮೇಲೆ ಕಣ್ಣಿಟ್ಟ ಪ್ರಭಾವಿಗಳು ತಮ್ಮದೇ ಆದ ನೆಲೆಯಲ್ಲಿ ಪ್ರಾಮುಖ್ಯತೆ ಬಿಂಬಿಸಿಕೊಳ್ಳುವ ಕಸರತ್ತು ನಡೆಸಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಯನ್ನು ಪ್ರಬಲ ವೀರಶೈವ ಲಿಂಗಾಯತ ಸಮುದಾಯಕ್ಕೆ ನೀಡಿರುವ ಕಾರಣ ಜಾತಿ, ವರ್ಗ ಹಾಗೂ ಪ್ರದೇಶವಾರು ಲೆಕ್ಕಾಚಾರ ಮುನ್ನೆಲೆಗೆ ಬಂದಿದೆ. ಆದರೆ ಸಮತೋಲನ, ಹೊಸ ಖದರ್ ಮತ್ತು ಜಾತಿ ಸಮೀಕರಣ ಆಧಾರದಲ್ಲಿ ವರಿಷ್ಠರು ಮಣೆ ಹಾಕುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ವಿಧಾನಮಂಡಲ ಪ್ರತಿಪಕ್ಷ ನಾಯಕರ ಹುದ್ದೆಗಳನ್ನು ಇತರ ಹಿಂದುಳಿದ ವರ್ಗ ಮತ್ತು ದಲಿತ ಸಮುದಾಯಗಳಿಗೆ ಹಂಚಿಕೆ ಮಾಡುವ ಸಾಧ್ಯತೆಗಳಿವೆ. ಉಪನಾಯಕ, ಪ್ರತಿಪಕ್ಷದ ಮುಖ್ಯ ಸಚೇತಕ, ರಾಜ್ಯ ಪದಾಧಿಕಾರಿಗಳ ನೇಮಕ ಸಂದರ್ಭದಲ್ಲಿ ಒಕ್ಕಲಿಗರನ್ನು ಪರಿಗಣಿಸುವ ಸಂಭವವಿದೆ ಎಂಬ ತರ್ಕವಿದೆ.
ಹಿರಿತನ ಹಾಗೂ ಪಕ್ಷದ ಸಾಮಾನ್ಯ ಕಾರ್ಯಕರ್ತ ಕೋಟಾದಲ್ಲಿ ಆರ್.ಅಶೋಕ್, ಎಸ್.ಸುರೇಶ್ ಕುಮಾರ್, ಒಕ್ಕಲಿಗರ ಕೋಟಾದಲ್ಲಿ ಮತ್ತೆ ಆರ್ ಅಶೋಕ್, ಡಾ.ಸಿ.ಎನ್.ಅಶ್ವತ್ಥನಾರಾಯಣ, ಒಬಿಸಿ ಲೆಕ್ಕಾಚಾರದಲ್ಲಿ ವಿ.ಸುನಿಲ್ ಕುಮಾರ್ ಹೆಸರುಗಳು ಕೇಳಿಬರುತ್ತಿವೆ. ಮೇಲ್ಮನೆಗೆ ಕೋಟ ಶ್ರೀನಿವಾಸ ಪೂಜಾರಿ, ತೇಜಸ್ವಿನಿ ರಮೇಶ್, ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ಹೆಸರು ಚರ್ಚೆಯಲ್ಲಿದ್ದು, ಪಕ್ಷದೊಳಗೆ ಸಾಕಷ್ಟು ಕುತೂಹಲ ಹುಟ್ಟಿಹಾಕಿದೆ.
ಪ್ರತಿಪಕ್ಷ ನಾಯಕರ ಹುದ್ದೆಗಳು ಒಬಿಸಿ, ದಲಿತ ಸಮುದಾಯಗಳಿಗೆ ಹಂಚಿದರೆ, ಪಕ್ಷದ ರಾಜ್ಯ ಪದಾಧಿಕಾರಿಗಳ ಹುದ್ದೆಗಳಲ್ಲಿ ಹೆಚ್ಚು ಪಾಲು ಸಿಗಬಹುದು ಎಂದು ಅಂದಾಜಿಸಿ ಒಕ್ಕಲಿಗ ಸಮುದಾಯದ ಎರಡನೇ ಹಂತದ ನಾಯಕರು ತೆರೆಮರೆಯ ಪ್ರಯತ್ನ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ ಪವರ್​ಫುಲ್ಬೆಳಗಾವಿ: ಯುವನಾಯಕ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಆಗಿರುವುದರಿಂದ ಕಾಂಗ್ರೆಸ್​ಗೆ ಯಾವುದೇ ನಷ್ಟ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಗೆ ಪ್ರಬಲ ನಾಯಕರಾಗಿದ್ದಾರೆ. ಅದೇ ರೀತಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿಯಲ್ಲಿ ಪ್ರಬಲ ನಾಯಕರು. ಅವರಿಗಿರುವ ಜನಬೆಂಬಲ, ಆಕರ್ಷಣೆ ಬಿಜೆಪಿಯಲ್ಲಿ ಯಾರಿಗೂ ಬರಲ್ಲ ಎಂದರು. ಬಿಜೆಪಿ ವರಿಷ್ಠರು ಕುಟುಂಬ ರಾಜಕಾರಣಕ್ಕೆ ಮಣೆ ಹಾಕುವುದಿಲ್ಲ ಎನ್ನುತ್ತಾರೆ. ಆದರೆ, ಕಳೆದ ಹತ್ತು ವರ್ಷಗಳಿಂದ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ. ಮಕ್ಕಳು ಶಾಸಕರು, ವಿಧಾನ ಪರಿಷತ್ ಸದಸ್ಯರೂ ಆಗಿದ್ದಾರೆ. ಹೀಗಾಗಿ ಕುಟುಂಬ ರಾಜಕಾರಣ ಕುರಿತು ಕಾಂಗ್ರೆಸ್​ನ್ನು ಟೀಕಿಸುವ ಬದಲು ಬಿಜೆಪಿ ವರಿಷ್ಠರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವುದು ಒಳ್ಳೆಯದು ಎಂದು ಹೇಳಿದರು. ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಎಂದಾಕ್ಷಣ ಎಲ್ಲ ವರ್ಗದ ಜನರು ವಿಜಯೇಂದ್ರ ಅವರ ಹಿಂದೆ ಬರುವುದಿಲ್ಲ. ಅವರು ಇನ್ನೂ ಬಹಳಷ್ಟು ಕಲಿಯಬೇಕಿದೆ. ರಾಜಕೀಯ ಪಕ್ಷವೆಂದ ಮೇಲೆ ಗುಂಪು ರಾಜಕಾರಣ ಇದ್ದದ್ದೆ. ಒಂದು ಗುಂಪನ್ನು ಸಮಾಧಾನ ಮಾಡಿದರೆ ಮತ್ತೊಂದು ಗುಂಪು ದೂರ ಹೋಗುತ್ತವೆ. ಅದನ್ನು ನಿಭಾಯಿಸುವ ಶಕ್ತಿ ಪಕ್ಷದ ಅಧ್ಯಕ್ಷರಿಗೆ ಇರಬೇಕು ಎಂದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿಗೆ ಬಿಎಸ್​ವೈ ಕಡೆಗಣನೆಯೂ ಕಾರಣವಾಗಿದೆ ಎಂದರು.
ಸದ್ಯ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾರೆ. ಹಾಗಾಗಿ ಈ ಸಲ ಮುಖ್ಯಮಂತ್ರಿ ಆಗಬೇಕೆಂದಿಲ್ಲ. ಮುಂದಿನ ಸಲ ನಾನು ಮುಖ್ಯಮಂತ್ರಿ ಆಗುವ ಅವಕಾಶಗಳಿವೆ.
| ಸತೀಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವ
https://www.vijayavani.net/notice-to-actor-darshan-to-attend-the-hearing
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
