ಬೆಂಗಳೂರು:ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ದಿನಗಣನೆ ನಡೆಯುತ್ತಿರುವುದರಿಂದ ಪ್ರಚಾರ ಕಾವೇರಿದೆ. ಎಲ್ಲ ಪ್ರಮುಖ ಪಕ್ಷಗಳ ನಾಯಕರು ತರಾತುರಿಯ ಪ್ರಚಾರದಲ್ಲಿ ತೊಡಗಿದ್ದು, ಮತ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದೆ. ಈ ನಡುವೆ ಅಭ್ಯರ್ಥಿಯೊಬ್ಬರ ಮೇಲೆ ಹಲ್ಲೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿ.ಗೋವಿಂದರಾಜು ಅವರ ಮೇಲೆ ಈ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ. ಇಂದು ಶುಕ್ರವಾರವಾದ್ದರಿಂದ ಮಸೀದಿ ಬಳಿ ಪ್ರಚಾರಕ್ಕೆ ತೆರಳಿ ಕರಪತ್ರ ಹಂಚುತ್ತಿರುವಾಗ ಹಲ್ಲೆ ಯತ್ನ ನಡೆದಿದೆ ಎಂದು ಆರೋಪ ಮಾಡಲಾಗಿದೆ.
ಇದನ್ನೂ ಓದಿ:ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ರೂ. ಕಳೆದುಕೊಂಡು ನಿಮ್ಹಾನ್ಸ್​ಗೆ ಹೋದ ಉದ್ಯಮಿ!
ಕಾರ್ಯಕರ್ತರೊಂದಿಗೆ ತೆರಳಿದ್ದ ಅಭ್ಯರ್ಥಿ ಅಲ್ಲಿ ಕರಪತ್ರ ಹಂಚಿ ಪ್ರಚಾರದಲ್ಲಿ ತೊಡಗಿ ಮತ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದಾಗ, ಇಲ್ಲೇಕೆ ಬಂದಿದ್ದೀರಿ ಎಂದು ಒಂದಷ್ಟು ಮಂದಿ ಪ್ರಶ್ನಿಸಿದ್ದಾರೆ. ‘ಕಾಂಗ್ರೆಸ್​ನವರು ಮಸೀದಿ ಕಟ್ಟಿದ್ದು, ನೀವು ಯಾಕೆ ಬಂದಿದ್ದೀರಾ?’ ಎಂದು ಪ್ರಶ್ನೆ ಮಾಡಿದ್ದ ಕೆಲವರು ಬಳಿಕ ಕೆಲವರು ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಗೋವಿಂದರಾಜು ದೂರು ನೀಡಿದ್ದಾರೆ.
ಇದು ಡೈವೋರ್ಸ್ ಫೋಟೋಶೂಟ್​: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:nine − seven =
Remember me
