ಬೆಂಗಳೂರು:ತುಂಬು ಗರ್ಭಿಣಿ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಗೋವಿಂದರಾಜನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬಲವಾದ ಪೆಟ್ಟು ಬಿದ್ದ ಪರಿಣಾಮ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದೆ.
ಜಯಶೀಲಾ ಎಂಬ ಗರ್ಭಿಣಿಗೆ ಆರೋಪಿಗಳು ಒದ್ದು ಹಲ್ಲೆ ಮಾಡಿದ್ದಾರೆ. ಪದ್ಮಮ್ಮ, ಕಾವ್ಯ ಎಂಬುವವರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಈ ಅಮಾನವೀಯ ಘಟನೆ ಸಂಭವಿಸಿದೆ.
ಜಯಶೀಲಾ ಹೋಟೆಲ್​​​​​​ಗೆ ಬಂದಾಗ ಗಲಾಟೆಯಾಗಿತ್ತು. ಆಗ ಗಲಾಟೆ ಬೇಡವೆಂದು ರಾಜಿ ಮಾಡಿಕೊಂಡಿದ್ದಾರೆ. ಆದರೆ ರಾಜಿ ಬಳಿಕ ಮತ್ತೆ ಗರ್ಭಿಣಿ ಮೇಲೆ ಆರೋಪಿಗಳು ಮತ್ತೆ ಹಲ್ಲೆ ನಡೆಸಿದ್ದಾರೆ. ಗರ್ಭಿಣಿ ಎಂಬುದನ್ನು ನೋಡದೇ ಒದ್ದು ಹಲ್ಲೆ ಮಾಡಿದ್ದಾರೆ. ಈ ವೇಳೆ ಹೊಟ್ಟೆಗೆ ಗಂಭೀರ ಪೆಟ್ಟು ಬಿದ್ದಿದೆ.
ಘಟನೆಯ ಸಂಬಂಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳ ವಿಚಾರಣೆಗೆ ಮುಂದಾಗಿದ್ದಾರೆ.
ಶಿವಪುರಿ ಅರಣ್ಯದಲ್ಲಿ ಭಾರೀ ಸಂಖ್ಯೆಯ ಹಸುಗಳ ಮೃತದೇಹಗಳು ಪತ್ತೆ; ಮೌನ ವಹಿಸಿದ ಅರಣ್ಯ ಇಲಾಖೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
