ರಾಮನಗರ:ಮೊದಲ ಹಂತದ ಮತದಾನಕ್ಕೆ ಇನ್ನೂ ಕೆಲವೇ ದಿನಗಳ ಬಾಕಿ ಇದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಕೆಳದ ಕೆಲವು ದಿನಗಳ ಹಿಂದೆ ಕುಣಿಗಲ್​ ತಾಲ್ಲೂಕಿನ ಅಂಚೆಪಾಳ್ಯದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್​ ಅವರ ಪರ ಮತಯಾಚಿಸಿದ್ದಕ್ಕೆ ವ್ಯಕ್ತಿ ಒಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು ಆ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಬೆಳಕಿಗೆ ಬಂದಿದೆ.
ಇದೀಗ ಕೇಳಿ ಬಂದಿರುವ ಮಾಹಿತಿ ಪ್ರಕಾರ ರಾಮನಗರ ಜಿಲ್ಲೆ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗಿರಿಗೌಡನ ದೊಡ್ಡಿಯಲ್ಲಿ ಬಿಜೆಪಿ ಪರ ಮತಯಾಚಿಸಿದ್ದಕ್ಕೆ ವ್ಯಕ್ತಿ ಒಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪಿಸಲಾಗಿದೆ. ಹಲ್ಲೆಗೊಳಗಾದವರನ್ನು ಮಹಾದೇವ್​ (32) ಎಂದು ಗುರುತಿಸಲಾಗಿದ್ದು, ಇವರನ್ನು ಹಾರೋಹಳ್ಳಿಯ ದಯಾನಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಪರ ಮತಯಾಚಿಸಿದ್ದಕ್ಕೆ ಮಹಾದೇವ್​ ಮೇಲೆ ಸ್ಥಳೀಯ ಪಂಚಾಯಿತಿ ಮುಖಂಡರು ಹಲ್ಲೆ ನಡೆಸಿದ್ದಾರೆ ಎಂದು ಸಂತ್ರಸ್ತನ ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ, ಆತ ರೌಡಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಎಂದು ಕೆಲವರು ದೂರಿದ್ದು, ಈ ಸಂಬಂಧ ಕಗ್ಗಲೀಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಇತ್ತ ಬಿಜೆಪಿ ಕಾರ್ಯಕರ್ತನ ಮೇಲೆ ಹ್ಲಲೆ ಕುರಿತು ಪ್ರತಿಕ್ರಿಯಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಿಪಬ್ಲಿಕ್ ಆಫ್ ಕನಕಪುರದ ಗೂಂಡಾಗಳು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದಕ್ಕಾಗಿ ಅವರಿಗೆ ಥಳಿಸಿರುವ ಘಟನೆ ರಾಮನಗರ ಜಿಲ್ಲೆ ಗಿರಿ ಗೌಡನ ದೊಡ್ಡಿಯಲ್ಲಿ ನಡೆದಿರುವುದು, ಸೋಲಿನ ಭೀತಿಯಲ್ಲಿರುವವರ ಅಸಹಿಷ್ಣುತೆ ತೋರಿಸುತ್ತದೆ. ಹಿಂಸಾಚಾರ, ಬೆದರಿಕೆಯಿಂದ ಚುನಾವಣೆ ಗೆಲ್ಲಲು ಕಾಂಗ್ರೆಸ್ ಹೊರಟಿದೆ. ನಮ್ಮ ಕಾರ್ಯಕರ್ತರಾಗಲಿ, ಪಕ್ಷವಾಗಲಿ ಇಂತಹ ಘಟನೆಗಳಿಂದ ವಿಚಲಿತರಾಗುವುದಿಲ್ಲ. ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ ಎಂದು ಭವಿಷ್ಯ ನುಡಿಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
