ತುಮಕೂರು:ಶಾಸಕರೊಬ್ಬರ ಮಗನ ಮೇಲೆಯೇ ಹಲ್ಲೆ ಆಗಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಶಾಸಕರ ಪುತ್ರನನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದು, ಅಡ್ಡಗಟ್ಟಿ ಕಪಾಳಕ್ಕೆ ಹೊಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ತುರುವೇಕೆರೆ ಶಾಸಕ, ರಾಜ್ಯ ಮಸಾಲೆ ಪದಾರ್ಥ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಸಾಲಾ ಜಯರಾಂ ಪುತ್ರ ತೇಜು ಮೇಲೆ ದಾಳಿಗೆ ಸಂಚು ಹಾಕಿದ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಗುಬ್ಬಿ ತಾಲೂಕು ನೆಟ್ಟಿಕೆರೆ ಕ್ರಾಸ್ ಬಳಿ ಕಾರಿನಲ್ಲಿ ಹಿಂಬಾಲಿಸಿಕೊಂಡ ಬಂದ ಹಂತಕರ ಗುಂಪು, ಶಾಸಕರ ಪುತ್ರನಿದ್ದ ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಸ್ಥಳೀಯರು ತಕ್ಷಣ ಧಾವಿಸಿ ತೇಜುವನ್ನು ರಕ್ಷಿಸಿದ್ದಾರೆ.
ಇದನ್ನೂ ಓದಿ:ಹೆಂಡತಿಯೊಂದಿಗೆ ಜಗಳ, ಇಬ್ಬರು ಗಂಡಂದಿರ ಸಾವು!
ಶಾಸಕರ ಪುತ್ರ ಅವರ ಕಾರಿನಲ್ಲಿ ಬೆಂಗಳೂರಿನಿಂದ ತುರುವೇಕೆರೆಯ ಅಂಕಲಕೊಪ್ಪ ಗ್ರಾಮಕ್ಕೆ ಬರುತ್ತಿದ್ದರು ಎನ್ನಲಾಗಿದೆ. ವೀರಣ್ಣಗುಡಿ ಗ್ರಾಮದ ರಾಮ, ಅವ್ವೇರಹಳ್ಳಿ ಗ್ರಾಮದ ಕೃಷ್ಣ, ಧನಂಜಯ್ಯ ಸೇರಿ ಹಲವರಿಂದ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಸಿ.ಎಸ್.ಪುರ ಪೊಲೀಸರು ಅವರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಆರೋಪಿಗಳು ಶಾಸಕರ ಪುತ್ರ ತೇಜುವಿನ ಕಪಾಳಕ್ಕೆ ಹೊಡೆದು ಹಲ್ಲೆ ನಡೆಸಿದ್ದು, ರಾಜಕೀಯ ವೈಷಮ್ಯಕ್ಕೆ ಗಲಾಟೆ ನಡೆದಿರುವ ಸಾಧ್ಯತೆ ಇದೆ. ಆರೋಪಿಗಳು ಜೆಡಿಎಸ್ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ‌ ಬೆಂಬಲಿಗರೆಂಬ ಮಾತುಗಳೂ ಕೇಳಿಬಂದಿವೆ.
ಬಸ್​ ಬರದಿದ್ರೂ ನೀವು ಪರೀಕ್ಷೆಗೆ ಬರಲೇಬೇಕು; ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ತಾಕೀತು

ಅಂತೂ 27 ವರ್ಷಗಳ ಬಳಿಕ ಶಿಕ್ಷೆ ಪ್ರಕಟ; ಪೊಲೀಸ್ ಇನ್​ಸ್ಪೆಕ್ಟರ್-ತಹಶೀಲ್ದಾರರೇ ಅಪರಾಧಿಗಳು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 18 =
Remember me
