ಬೆಂಗಳೂರು:ಇಲ್ಲಿನ ವಿದ್ಯಾಪೀಠ ರಸ್ತೆಯಲ್ಲಿ ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸೆಪ್ಟೆಂಬರ್​ 4ರಂದು ಸಂಜೆ 7.40ರ ಹೊತ್ತಿಗೆ ಘಟನೆ ನಡೆದಿದೆ. ತಾಯಿ ದೀಪಾ ಶ್ರೀಕುಮಾರ್ ಮತ್ತು ಮಗಳು ಹಿಷಿತಾ ದ್ವಿಚಕ್ರವಾಹನದಲ್ಲಿ ವಿದ್ಯಾಪೀಠ ರಸ್ತೆಯಲ್ಲಿ ತೆರಳುತ್ತಿದ್ದರು. ಇನ್ನೊಂದು ಬೈಕ್​​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೀಪಾ ಮೇಲೆ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ತಡೆಯಲು ಹೋದ ಹಿಷಿತಾ ಮೇಲೆ ಕೂಡ ದಾಳಿ ಮಾಡಿದ್ದಾರೆ. ಅಷ್ಟರಲ್ಲಿ ಸಾರ್ವಜನಿಕರು ಸೇರಿದ್ದರಿಂದ ಕೂಡಲೇ ಅಲ್ಲಿಂದ ಎಸ್ಕೇಪ್​ ಆಗಿದ್ದಾರೆ.ಇದನ್ನೂ ಓದಿ:ಕೇರಳ ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್​ ಪತ್ನಿಗೆ ಗಂಡುಮಗು ಜನನ
ದೀಪಾ ಅವರು ಆಸ್ಟಿನ್​ ಸ್ಕೂಲ್​ ಸಂಸ್ಥಾಪಕ ಶ್ರೀಕುಮಾರ್ ಅವರ ಎರಡನೇ ಪತ್ನಿ. ಇವರಿಬ್ಬರ ನಡುವೆ ಆಸ್ತಿ ವಿವಾದವಿದೆ. ಕೋರ್ಟ್​ನಲ್ಲಿ ವ್ಯಾಜ್ಯ ನಡೆಯುತ್ತಿದೆ. ಇದೀಗ ಶ್ರೀಕುಮಾರ್​, ಅವರ ಪುತ್ರ ಜಯಂತ್​, ಪುತ್ರಿ ಮೋನಿಷಾ ಮತ್ತು ಅಳಿಯ ನವೀನ್​ ಅವರೇ ದೀಪಾ ಮತ್ತು ಹಿಷಿತಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಿ.ಕೆ.ಅಚ್ಚುಕಟ್ಟು ಠಾಣೆಯಲ್ಲಿ ಈ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಘಟನೆ ನಡೆದು ಮೂರು ದಿನವಾದರೂ ಆರೋಪಿಗಳನ್ನು ಪೊಲೀಸರು ಬಂಧಿಸಲಿಲ್ಲ ಎನ್ನಲಾಗಿದೆ.
ಬೆಂಗಳೂರಿನ ವಿದ್ಯಾಪೀಠ ರಸ್ತೆಯಲ್ಲಿ ಸ್ಕೂಟರ್​​ನಲ್ಲಿ ಹೋಗುತ್ತಿದ್ದ ತಾಯಿ-ಮಗಳ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ದುಷ್ಕರ್ಮಿಗಳು
ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ:https://t.co/yE7kUVC4Cypic.twitter.com/J6KHRFG0SM
— Vijayavani (@VVani4U)September 7, 2020

ರಸ್ತೆ ಅಗಲೀಕರಣಕ್ಕಾಗಿ ಪುರಾತನ ಆಂಜನೇಯ ಸ್ವಾಮಿ ದೇಗುಲ ತೆರವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + nine =
Remember me
