ಮಂಗಳೂರು:ಬೀದಿ ನಾಯಿಗಳ ಆಶ್ರಯದಾತೆಯಾಗಿರುವ ರಜನಿ ಶೆಟ್ಟಿ ಎಂಬುವವರ ಮೇಲೆ ನೆರೆಮನೆಯವರು ಕಲ್ಲಿನಿಂಡ ಹೊಡೆದು ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಗಾಯಗೊಂಡಿರುವ ರಜನಿ ಶೆಟ್ಟಿ ಅವರನ್ನು ವೆನ್ಲಾಕ್​ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆರೆಮನೆಯಲ್ಲಿ ವಾಸಿಸುವ ಮಂಜುಳಾ ಶೆಟ್ಟಿ ಎಂಬುವವರು ರಜನಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:VIDEO| ಗುಟ್ಕಾ ಉಗುಳಿದ ಎಂಬ ಕಾರಣಕ್ಕೆ ಯುವಕನನ್ನು ಅಮಾನುಷವಾಗಿ ಥಳಿಸಿದ ಪೊಲೀಸ್​ ಅಧಿಕಾರಿ
ಪ್ರತಿನಿತ್ಯ ಅಸಂಖ್ಯಾತ ಬೀದಿ ನಾಯಿಗಳಿಗೆ ರಜನಿ ಶೆಟ್ಟಿಯವರು ಆಹಾರ ನೀಡುತ್ತಿದ್ದರು. ಈ ವಿಚಾರವಾಗಿ ಮಂಜುಳಾ ಶೆಟ್ಟಿ ರಜನಿ ಅವರೊಂದಿಗೆ ಗಲಾಟೆ ಮಾಡುತ್ತಿದ್ದರು. ಸೋಮವಾರ ಬೆಳಗ್ಗೆ ಸಹ ಇದೇ ವಿಚಾರಕ್ಕೆ ಗಲಾಟೆ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮಂಜುಳಾ ರಜನಿ ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.
ಹಲ್ಲೆ ಸಂಬಂಧ ಮಂಜುಳಾ ವಿರುದ್ಧ ಬರ್ಕೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಗಾಯಾಳು ರಜನಿ ಅವರನ್ನು ಚಿಕಿತ್ಸೆಗಾಗಿ ವೆನ್ಲಾಕ್​ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
