ತಿಪಟೂರು:ಧರ್ಮಪ್ರಜ್ಞೆ, ರಾಷ್ಟ್ರಪ್ರಜ್ಞೆ, ಸಮಾಜಪ್ರಜ್ಞೆ ರೂಪಿಸುವ ಮಠಮಾನ್ಯಗಳ ಕಾರ್ಯ ನಿರಂತರವಾಗಿರಲಿ. ಅದಕ್ಕೆ ಬೇಕಾದ ಎಲ್ಲ ನೆರವು ನೀಡಲು ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ತಾಲೂಕಿನ ನೊಣವಿನಕೆರೆ ಸೋಮೇಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠದಲ್ಲಿ ಬುಧವಾರ ಆಯೋಜಿಸಿದ್ದ ಶ್ರೀ ಕರಿಬಸವ ಸ್ವಾಮೀಜಿ 227ನೇ ವಾರ್ಷಿಕ ಸ್ಮರಣೋತ್ಸವ, ಮಠದ 19ನೇ ಗುರು ಶ್ರೀಕರಿಬಸವ ದೇಶೀಕೇಂದ್ರ ಸ್ವಾಮೀಜಿ 12ನೇ ಪುಣ್ಯಾರಾಧನೆ ಹಾಗೂ ರಥೋತ್ಸವ, ಧರ್ಮಸಭೆ ಉದ್ಘಾಟಿಸಿ ಮಾತನಾಡಿದರು.
ಇತಿಹಾಸದ ವಿವಿಧ ಕಾಲಘಟ್ಟಗಳಲ್ಲಿ ಕಾಡಸಿದ್ದೇಶ್ವರ ಮಠವು ಅನೇಕ ಸಂಸ್ಥಾನಗಳಿಗೆೆ ಮಾರ್ಗದರ್ಶನ ನೀಡಿದ ತಪೋಭೂಮಿ. ಶಾಂತಿ ಹಾಗೂ ಧಾರ್ವಿುಕ ಸಾಮರಸ್ಯದ ರೂವಾರಿಯಾರುವ ಶ್ರೀಗಳು, ಸಮಾಜದ ಉಜ್ವಲ ಸೌಹಾರ್ದ ಬದುಕಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಬಣ್ಣಿಸಿದರು.
ಬಿಎಸ್​ವೈ ಬಡವರ ದನಿ: ಕಡುಬಡವರಿಗೆ ದನಿಯಾಗುವ, ಸೂರಿಲ್ಲದವರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ತಮ್ಮನ್ನು ಸಂಪೂರ್ಣವಾಗಿ ಸಮರ್ಪಿಸಿಕೊಂಡಿದ್ದಾರೆ. ಅವರು ಮುಂದಿನ ಮೂರು ವರ್ಷ 4 ತಿಂಗಳನ್ನು ರಾಜ್ಯದ ಮುಖ್ಯಮಂತ್ರಿಯಾಗಿ ಅವಧಿ ಪೂರೈಸಲಿದ್ದು, ಇಡೀ ದೇಶವೇ ಗುರುತಿಸುವ ಹಂತಕ್ಕೆ ರಾಜ್ಯವನ್ನು ಕೊಂಡೊಯ್ಯುವುದರಲ್ಲಿ ಸಂಶಯವಿಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.
ಸುತ್ತೂರು ಮಠದ ಉತ್ತರಾಧಿಕಾರಿ ಶ್ರೀ ಶಿವರಾತ್ರಿ ಜಯರಾಜೇಂದ್ರ ಸ್ವಾಮೀಜಿ, ಮಹಾರಾಷ್ಟ್ರದ ಕರಜಗಿ ವಿರಕ್ತ ಮಠದ ಶ್ರೀ ಶಿವಾನಂದ ಸ್ವಾಮೀಜಿ, ಯಲಗೋಡು ಮಠದ ಶ್ರೀ ಗುರುಲಿಂಗ ಸ್ವಾಮೀಜಿ, ಶಾಸಕ ಬಿ.ಸಿ. ನಾಗೇಶ್, ಮಾಜಿ ಸಚಿವ ಸೊಗಡು ಶಿವಣ್ಣ ಮತ್ತಿತರರು ಉಪಸ್ಥಿತರಿದ್ದರು.
ಧಾರ್ವಿುಕ, ಶೈಕ್ಷಣಿಕ ಸಾಂಸ್ಕೃತಿಕ ಕ್ಷೇತ್ರಗಳ ಸಂಗಮ ಜನಸ್ಪಂದನೆಯೇ ನಿಜವಾದ ಧರ್ಮ ಎಂಬ ತತ್ವಪಾಲನೆಯಲ್ಲಿ ತೊಡಗಿಸಿಕೊಂಡಿರುವ ಕರಿವೃಷಭದೇಶಿಕೇಂದ್ರ ಶಿವಯೋಗೀಶ್ವರ ಶ್ರೀಗಳು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿ, ನೊಂದವರ ಕಣ್ಣೊರೆಸುತ್ತಿದ್ದಾರೆ. ಮಠವು ನಾಡಿನ ಪರಂಪರೆ, ಧಾರ್ವಿುಕ, ಶೈಕ್ಷಣಿಕ ಸಾಂಸ್ಕೃತಿಕ ಕ್ಷೇತ್ರಗಳ ಸಂಗಮವಾಗಿದೆ.
| ಬಿ.ಎಸ್. ಯಡಿಯೂರಪ್ಪ ಸಿಎಂ
ಎಲ್ಲ ಮಠ, ಮಂದಿರಗಳ ನಿರಂತರ ಸೇವೆಯಲ್ಲಿ ತಮ್ಮನ್ನು ಅರ್ಪಿಸಿಕೊಂಡಿರುವ ಯಡಿಯೂರಪ್ಪ ಶ್ರೀಮಠದ ಸಂಕಲ್ಪ ಹಾಗೂ ಆಶೀರ್ವಾದ ಪಡೆದಿದ್ದಾರೆ. ಮುಂದಿನ 3 ವರ್ಷ 4 ತಿಂಗಳು ನಿರಾತಂಕವಾಗಿ ಅಧಿಕಾರ ಪೂರೈಸಲಿದ್ದಾರೆ. ನಮ್ಮ ಕೃಪಾಶೀರ್ವಾದ ಸದಾ ಅವರಿಗಿದೆ.
| ಶ್ರೀ ಕರಿಬಸವ ದೇಶೀಕೇಂದ್ರ ಸ್ವಾಮೀಜಿ
ಕಾಡಸಿದ್ದೇಶ್ವರ ಮಠ, ನೊಣವಿನಕೆರೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
