ಬೆಂಗಳೂರು: ಕರೊನಾ ಲಾಕ್​ಡೌನ್ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ನೆರವಾಗಲು ಸರ್ಕಾರ ನಿರ್ಧರಿಸಿದೆ. ಸೋಮವಾರ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ನೇತೃತ್ವದ ನಿಯೋಗ, ಕಲಾವಿದರ ಸಂಕಷ್ಟದ ಬಗ್ಗೆ ವಿವರಣೆ ನೀಡಿತು.
ಜನಪದ ಸೇರಿ ವಿವಿಧ ಪ್ರಕಾರದ ಸರಿಸುಮಾರು 16 ಸಾವಿರ ಕಲಾವಿದರು ಸಂಕಷ್ಟಕ್ಕೆ ಸಿಲುಕಿದ್ದು ಆರ್ಥಿಕ ನೆರವು ನಿರೀಕ್ಷಿಸಿದ್ದು, ಇವರ ಪೈಕಿ 6 ಸಾವಿರ ಮಂದಿ ವಿವಿಧ ರೂಪದ ಮಾಸಾಶನ ಪಡೆಯುತ್ತಿದ್ದಾರೆ. ಉಳಿದ 10 ಸಾವಿರ ಮಂದಿಗೆ ನೆರವು ನೀಡಲು 2 ಕೋಟಿ ರೂ. ನೀಡಲು ಸಿಎಂ ನಿರ್ಧರಿಸಿದರು.
ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಟಿ.ಎಸ್.ನಾಗಾಭರಣ, ಆರ್ಥಿಕ ಸಂಕಷ್ಟದಲ್ಲಿರುವ 10 ಸಾವಿರ ಕಲಾವಿದರಿಗೆ ತಕ್ಷಣ ಆರ್ಥಿಕ ನೆರವು ನೀಡಲು ಸಿಎಂ ತೀರ್ವನಿಸಿದ್ದಾರೆ. ನಮ್ಮ ಕೋರಿಕೆ ಮಾನ್ಯ ಮಾಡಿದ್ದಕ್ಕೆ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಇನ್ನೆರೆಡು ದಿನಗಳಲ್ಲಿ ಮಾರ್ಗಸೂಚಿ ಹೊರಡಲಿದ್ದು, ಬಳಿಕ ನೆರವು ಅಪೇಕ್ಷಿಸಿ ಈಗಾಗಲೇ ಅರ್ಜಿ ಸಲ್ಲಿಸಿದ ಕಲಾವಿದರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ ಎಂದು ನಿಯೋಗದಲ್ಲಿದ್ದವರು ತಿಳಿಸಿದರು.
ವಿಡಿಯೋ ಗೇಮ್ಸ್​ ಆಡುವುದರಲ್ಲಿ ಮಗ್ನರಾಗಿದ್ದ ಧೋನಿ ಗಮನ ಸೆಳೆಯಲು ಪತ್ನಿ ಸಾಕ್ಷಿ ಸಿಂಗ್​ ಮಾಡಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
