ಬೆಂಗಳೂರು:ಸಂವಿಧಾನ ಅಪಾಯದಲ್ಲಿದೆ ಎಂದು ಹೇಳಿ ನಿನ್ನೆಯ (ನ.26) ಸಂವಿಧಾನ ದಿನದಂದೇ ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದ್ದಾರೆ.
ಸುಹೇಲ್​ ಅಹಮದ್​​ ರಾಜೀನಾಮೆ ನೀಡಿದ ಅಧಿಕಾರಿ. ಆಂತರಿಕ ಭದ್ರತಾ ವಿಭಾಗದ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ 1ನೇ ಪಡೆಗೆ ಅಸಿಸ್ಟೆಂಟ್​ ಕಮಾಂಡೆಂಟ್​ ಆಗಿದ್ದರು. ಇದೀಗ ಆ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ತಮ್ಮ ಫೇಸ್​ಬುಕ್​ ಖಾತೆಯಲ್ಲಿ ರಾಜೀನಾಮೆ ಪತ್ರವನ್ನು ಪೋಸ್ಟ್​ ಮಾಡಿರುವ ಸುಹೇಲ್​ ಅಹಮದ್​​, ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಂವಿಧಾನದ ತತ್ವ ಆಶಯಗಳು ಅಪಾಯದಲ್ಲಿರುವುದರಿಂದ ಸಂವಿಧಾನ ನನಗೆ ಕೊಡುಗೆಯಾಗಿ ನೀಡಿರುವ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗೆ, ದೇಶಕ್ಕೆ ಸಂವಿಧಾನ ಸಮರ್ಪಣೆಯಾದ ಮಹತ್ವದ ದಿನದಂದೇ ಸಂವಿಧಾನದ ಕಾಯಕಲ್ಪ ಸಂಕಲ್ಪದೊಂದಿಗೆ ರಾಜಿನಾಮೆ ಸಲ್ಲಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ರಾಜೀನಾಮೆ ಪತ್ರದಲ್ಲಿ ಏನಿದೆ?ಸುಹೇಲ್​ ಅಹಮದ್​, ಅಸಿಸ್ಟೆಂಟ್​ ಕಮಾಂಡೆಂಟ್​ ಆದ ನಾನು ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಂವಿಧಾನದ ತತ್ವಗಳು ಅಪಾಯದಲ್ಲಿ ಇರುವುದರಿಂದ ಸಂವಿಧಾನ ನನಗೆ ಕೊಡುಗೆಯಾಗಿ ನೀಡಿರುವ ಅಸಿಸ್ಟೆಂಟ್​ ಕಮಾಂಡೆಂಟ್​ ಹುದ್ದೆಯನ್ನು ದೇಶಕ್ಕೆ ಸಂವಿಧಾನ ಸಮರ್ಪಣೆಯಾದ ಈ ಮಹತ್ವದ ದಿನದಂದು ಸಂವಿಧಾನ ಕಾಯಕಲ್ಪ ಸಂಕಲ್ಪದೊಂದಿಗೆ ನನ್ನ ಹುದ್ದೆಯನ್ನು ಸಮರ್ಪಿಸಿ, ನನ್ನ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಮತ್ತು ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಪೊಲೀಸ್​ ಪ್ರದಾನ ಕಚೇರಿಯ ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕರಿಗೆ ಸುಹೇಲ್​ ಅಹಮದ್​ ರಾಜೀನಾಮೆ ಪತ್ರವನ್ನು ಬರೆದಿದ್ದಾರೆ. ಅಂದಹಾಗೆ ನ.26 ಸಂವಿಧಾನ ದಿನವನ್ನಾಗಿ ಆಚರಣೆ ಮಾಡುತ್ತೇವೆ.

ಭಯಗೊಂಡಾಗ ನಮ್ಮ ದೇಹದಲ್ಲಿ ಏನೆಲ್ಲಾ ಬದಲಾವಣೆಗಳು ಆಗುತ್ತವೆ ಗೊತ್ತಾ?

ರಾಜ್ಯದಲ್ಲಿ ನಾಲ್ಕು ದಿನ ಸಾಧಾರಣ ಮಳೆ: ಹವಾಮಾನ ಇಲಾಖೆ ಮೂನ್ಸೂಚನೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − 13 =
Remember me
