ನೆಲಮಂಗಲ:ಈಕೆ ಡಬಲ್​ ಗ್ರ್ಯಾಜುವೇಟ್​. ಆದರೆ ಕೆಎಎಸ್​ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ತೀವ್ರ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ವಿಜಯನಗರ ಬಡಾವಣೆಯಲ್ಲಿ ಈ ಪ್ರಕರಣ ನಡೆದಿದೆ.
ಚಿಂತಾಮಣಿ ತಾಲ್ಲೂಕು ಟಿ. ದೇವಪಲ್ಲಿ ಮೂಲದ ಡಿ.ಎಸ್​. ಮೀನಾ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಎಂಎ ಪದವೀಧರೆ ಆಗಿರುವ ಇವರು 18 ವರ್ಷಗಳ ಹಿಂದೆ ಲಚ್ಚಿ ರೆಡ್ಡಿ ಎಂಬವರೊಂದಿಗೆ ವಿವಾಹವಾಗಿದ್ದರು. ಇವರು ಕಾಲೇಜೊಂದರಲ್ಲಿ ಕನ್ನಡ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಕೆಎಎಸ್ ಪರೀಕ್ಷೆ ಬರೆದಿದ್ದ ಮೀನಾ, ಆ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿರುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆ ಮೇಲಿನ ಶೆಡ್​ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲ ಟೌನ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + eighteen =
Remember me
