ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಮಾ.12ರಿಂದ 16ರವರೆಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ರೂಪಿಸಿದ್ದು, ಒಂದು ತಿಂಗಳು ಮೊದಲೇ ಪರೀಕ್ಷಾ ದಿನಾಂಕವನ್ನೂ ಪ್ರಕಟಿಸಿದೆ.
‘1,242 ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕ ಗೊಂದಲ’ ಶೀರ್ಷಿಕೆ ಅಡಿ ವಿಜಯವಾಣಿ ಭಾನುವಾರ ವಿಶೇಷ ವರದಿ ಪ್ರಕಟಿಸಿತ್ತು. ವೇಳಾಪಟ್ಟಿ ಪ್ರಕಟಿಸದೇ ಇರುವುದಕ್ಕೆ ಅಭ್ಯರ್ಥಿಗಳಿಂದ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಬೆಳಕು ಚೆಲ್ಲಿತ್ತು.ಈ ಹಿಂದೆ ಪ್ರಕಟಿಸಿದ್ದ ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆಗಳನ್ನು ಸ್ವೀಕರಿಸಿ, ಅಂತಿಮ ವೇಳಾಪಟ್ಟಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾ.12ರಿಂದ 16ರವರೆಗೆ ಪರೀಕ್ಷೆ ನಡೆಸಲಿದೆ. ಅರ್ಹ ಅಭ್ಯರ್ಥಿಗಳು ಫೆ.28ರ ನಂತರ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್http://kea.kar.nic.inನೋಡಬಹುದು.
ಈ ಮೊದಲು ಫೆ.26ರಿಂದ 28ರವರೆಗೆ ವಿಶ್ವವಿದ್ಯಾಲಯ ಹಂತದಲ್ಲಿ ಪರೀಕ್ಷೆ ನಡೆಸಲು ವಿವಿಗಳಿಗೆ ಸೂಚನೆ ನೀಡಿತ್ತು. ಆತುರದಲ್ಲಿ ಪರೀಕ್ಷೆ ನಡೆಸುತ್ತಿರುವ ಬಗ್ಗೆ ಅಭ್ಯರ್ಥಿಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕ ಗುರುತಿಸಿ ಒಂದು ತಿಂಗಳು ಮುಂಚಿತವಾಗಿಯೇ ದಿನಾಂಕ ಪ್ರಕಟಿಸಿದೆ.
‘ಇನ್ನೂ ಗ್ಯಾರಂಟೀ..’ ಎನ್ನುತ್ತ ಆ ನೆನಪನ್ನು ಹಂಚಿಕೊಂಡ ರಾಘವೇಂದ್ರ ರಾಜಕುಮಾರ್​
ರೈಲ್ವೆ ಪ್ಲ್ಯಾಟ್​ಫಾರ್ಮ್​ನಲ್ಲಿ ಸಿಲುಕಿದ ಬಾಲಕಿ; ನೆರವಿಗೆ ಧುಮುಕಿ ಜೀವ ಉಳಿಸಿದ ಲೋಕೋಪೈಲಟ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
