ಬೆಂಗಳೂರು:ಸ್ವಾವಲಂಬಿ ಭಾರತದ ಪ್ಯಾಕೇಜ್​ನಡಿ 3ನೇ ಹಂತದಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವ ಯೋಜನೆಗಳು ದೇಶದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಲಿದೆ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಶುಕ್ರವಾರ ಸಂಜೆ ನಡೆಸಿದ ಸುದ್ದಿಗೋಷ್ಠಿಯ ಬಳಿಕ ಸಿಎಂ ಬಿ.ಎಸ್​. ಯಡಿಯೂರಪ್ಪ ಈ ಪ್ರತಿಕ್ರಿಯೆ ನೀಡಿದ್ದಾರೆ. ದೇಶದಲ್ಲಿ ಇರುವ ಶೇ.85 ಸಣ್ಣ ಮತ್ತು ಅತಿಸಣ್ಣ ರೈತರಿಗೆ ಇದರಿಂದ ಹೆಚ್ಚಿನ ಲಾಭವಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಇಂದು ಕೃಷಿಗೆ ಪೂರಕವಾದ ಮೂಲಸೌಕರ್ಯ ಅಭಿವೃದ್ಧಿಗೆ ಹಾಗೂ ಕೃಷಿ ಮತ್ತು ವಿವಿಧ ಉಪಕಸುಬುಗಳಿಗೆ ಒತ್ತು ನೀಡಲಾಗಿದೆ. ಇದು ಸಕಾಲಿಕವಾಗಿದೆ. ರೈತರಿಗೆ ಅದರಲ್ಲೂ ತೋಟಗಾರಿಕೆ ಬೆಳೆಗಳನ್ನು ಬೆಳೆಯುವವರಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ:ಲಡಾಖ್​ ಹೊಯ್​ಕೈ ಬಳಿಕ ಭಾರತದ ವಿರುದ್ಧ ನೇಪಾಳವನ್ನು ಎತ್ತಿಕಟ್ಟುತ್ತಿರುವ ಚೀನಾ
ರಾಗಿಗೆ ಗ್ಲೋಬಲ್ ಬ್ರ್ಯಾಂಡಿಂಗ್​ ನೀಡಲಾಗಿದೆ. ಇದರಿಂದಾಗಿ ರಾಜ್ಯದ ರಾಗಿಗೆ ಬೇಡಿಕೆ ಹೆಚ್ಚಾಗಲಿದೆ. ತನ್ಮೂಲಕ ಕೇಂದ್ರ ಸರ್ಕಾರ ಸಾವಯವ ಕೃಷಿ ಮತ್ತು ದೇಶಿ ಬೆಳೆಗಳನ್ನು ಪ್ರೋತ್ಸಾಹಿಸಲು ಅಗತ್ಯ ಕ್ರಮ ಕೈಗೊಂಡಂತಾಗಿದೆ ಎಂದು ತಿಳಿಸಿದರು.
ಒಂದು ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ದೇಶಾದ್ಯಂತ ಶೀತಲೀಕರಣ ಘಟಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಕೊಯ್ಲೋತ್ತರ ಕೆಲಸಗಳಿಗೆ ಮತ್ತು ನಿರ್ವಹಣೆಗೆ ಅನುಕೂಲವಾಗಲಿದೆ. ಇದರಿಂದಾಗಿ ನಮ್ಮ ರೈತರು ಬೆಳೆದ ಈರುಳ್ಳಿಯನ್ನು ಹೆಚ್ಚು ದಿನಗಳವರೆಗೆ ಸಂಗ್ರಹಿಸಿ, ಹೆಚ್ಚಿನ ಬೆಲೆ ಬಂದಾಗ ಮಾರಾಟ ಮಾಡಲು ಸಾಧ್ಯವಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಈರುಳ್ಳಿ, ಟೊಮ್ಯಾಟೋ ಆಲೂಗಡ್ಡೆಗಳ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಶೇ.50ಸಹಾಯಧನ ಘೋಷಿಸಲಾಗಿದೆ. ಇದೊಂದು ಐತಿಹಾಸಿಕ ನಿರ್ಧಾರ. ಇದಕ್ಕೆ 500 ಕೋಟಿ ರೂ.ಗಳನ್ನು ನಿಗದಿಪಡಿಸಿದ್ದು, ನಮ್ಮ ರಾಜ್ಯದ ಈರುಳ್ಳಿ, ಟೊಮ್ಯಾಟೋ ಮತ್ತು ಆಲೂಗಡ್ಡೆ ಬೆಳೆಗಾರರಿಗೆ ಹೆಚ್ಚಿನ ಲಾಭವಾಗಲಿದೆ ಎಂದರು.
ಎರಡು ಪಾಳಿಯಲ್ಲಿ ನಡೆಯಲಿವೆ ತರಗತಿ: ಶಾಲೆ-ಕಾಲೇಜು ಆರಂಭಕ್ಕೆ ಮಾರ್ಗಸೂಚಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + fifteen =
Remember me
