ಬೀದರ್:ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ದರೋಡೆಕೋರರು ಹಲ್ಲೆ ಮಾಡಲು ಮುಂದಾಗಿದ್ದು, ಬಳಿಕ ಸರ್ಕಲ್ ಪೊಲೀಸ್ ಇನ್​ಸ್ಪೆಕ್ಟರ್​ ಗುಂಡು ಹಾರಿಸಬೇಕಾದ ಪ್ರಸಂಗ ಎದುರಾಗಿತ್ತು. ಬೀದರ್​ನಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಇದನ್ನೂ ಓದಿ:ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..
ಇಲ್ಲಿನ ಮೈಕೂರ್​ನ ರಿಂಗ್​ರೋಡ್​ನಲ್ಲಿ ಈ ಘಟನೆ ನಡೆದಿದೆ. ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖದೀಮರನ್ನು ತಮಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಹೆಡೆಮುರಿ ಕಟ್ಟಲು ಪೊಲೀಸರು ಮುಂದಾಗಿದ್ದ ಸಂದರ್ಭದಲ್ಲಿ ಈ ಹಲ್ಲೆಯತ್ನ ನಡೆದಿದೆ.
ಇದನ್ನೂ ಓದಿ:ಹತ್ತು ವರ್ಷಗಳಿಗೂ ಅಧಿಕ ಕಾಲ ಒಂದಾದ ಮೇಲೊಂದು ಹೆರಿಗೆ; 28ನೇ ವಯಸ್ಸಿನಲ್ಲೇ 9 ಮಕ್ಕಳ ಮಹಾತಾಯಿ!
ಇಬ್ಬರು ದರೋಡೆಕೋರರು ಪೊಲೀಸರ ಮೇಲೇ ಹಲ್ಲೆ ಮಾಡಲು ಬಂದಾಗ ಬೀದರ್​ ರೂರಲ್ ಸಿಪಿಐ ಮಲ್ಲಿಕಾರ್ಜುನ ಯಾತನೂರ್ ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸಿದ್ದರು. ಬಳಿಕ ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲು ಯಶಸ್ವಿಯಾಗಿದ್ದರು. ಆದರೆ ಇನ್ನೊಬ್ಬ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಪಿಎಸ್ಐ ನಾಗೇಂದ್ರ ಮತ್ತು ಸಿಬ್ಬಂದಿ ಕೂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
