ನೆಲಮಂಗಲ:ಕೆಪಿಎಂಇ ಕಾಯ್ದೆಯಡಿ ನೋಂದಣಿಯಾಗದ ಮೂರು ಕ್ಲಿನಿಕ್ ಹಾಗೂ ಎರಡು ಡಯಾಗ್ನಾಸ್ಟಿಕ್ ಕೇಂದ್ರಗಳ ಮೇಲೆ ಗುರುವಾರ(ಡಿ.08) ದಾಳಿ ನಡೆಸಿದ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಐದಕ್ಕೂ ಹೆಚ್ಚು ಕೇಂದ್ರಗಳಿಗೆ ಬೀಗ ಜಡಿದಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ತ್ಯಾಮಗೊಂಡ್ಲು ವ್ಯಾಪ್ತಿಯಲ್ಲಿ ನಡೆದಿದೆ.
ಹೋಬಳಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ಲಿನಿಕ್ ಹಾಗೂ ಡಯಾಗ್ನಾಸ್ಟಿಕ್ ಕೇಂದ್ರಗಳಿಗೆ ಈಗಾಗಲೇ ಅನೇಕ ಬಾರಿ ನೋಟಿಸ್ ನೀಡಿದ್ದರೂ ಯಾವುದೆ ಪ್ರತಿಕ್ರಿಯೆ ಬಂದಿರಲಿಲ್ಲ. ಅಲ್ಲದೆ ಕೆಪಿಎಂಎ ಕಾಯ್ದೆ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿದ್ದವು ಎಂಬ ಕಾರಣಕ್ಕೆ ಜಿಲ್ಲಾಧಿಕಾರಿ ನಿರ್ದೇಶನದಂತೆ ದಾಳಿ ನಡೆಸಲಾಗಿದೆ.
ತಾಲೂಕು ವೈದ್ಯಾಧಿಕಾರಿ ಹೇಮಲತಾ ನೇತೃತ್ವದಲ್ಲಿ ದಾಳಿ ನಡೆಸಿ ಹೋಬಳಿಯ ಅಶ್ವಿನಿ ಕ್ಲಿನಿಕ್, ಶ್ರೀ ಗಣೇಶ ಮತ್ತು ಗಣೇಶ ಕ್ಲಿನಿಕ್, ವಿನಾಯಕ ಡಯಾಗ್ನಾಸ್ಟಿಕ್ ಲ್ಯಾಬ್ ಹಾಗೂ ಎಸ್‌ಎಲ್​ವಿ ಲ್ಯಾಬ್​ಗಳ ಬಾಗಿಲು ಮುಚ್ಚಿಸಲಾಗಿದೆ. ತಾಲೂಕು ವೈದ್ಯಾಧಿಕಾರಿಗಳು ದಾಳಿ ನಡೆಸುವ ಮುನ್ಸೂಚನೆ ಅರಿತ ಕೆಲವು ಕ್ಲಿನಿಕ್‌ಗಳು ಬೆಳಗ್ಗೆ ಬಾಗಿಲು ತೆರೆದಿರಲಿಲ್ಲ ಎನ್ನಲಾಗಿದ್ದು, ದಾಳಿ ವೇಳೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಹೊರಗಡೆಯಿಂದ ಬೀಗ ಜಡಿದು ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + one =
Remember me
