ಬೆಂಗಳೂರು:ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಶಾಸಕರೇ ಆಗಲಿ, ಸಂಸದರೇ ಆಗಲಿ ಕಟ್ಟುನಿಟ್ಟಿನ ಕ್ರಮ ನಿಶ್ಚಿತ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಗುಡುಗಿದರು.
ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೂಂಡಾವರ್ತನೆ, ದಾದಾಗಿರಿ ಮಾಡಿ ಉಳಿದುಕೊಳ್ಳುತ್ತೇವೆ ಎಂದು ತಿಳಿದಿದ್ದರೆ ಅದು ಸಾಧ್ಯವಿಲ್ಲ. ಇಂತಹ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಶಾಸಕರು ಠಾಣೆಯೊಳಗೆ ಹೋಗಿ ಗಲಾಟೆ ಮಾಡುತ್ತಾರೆ. ಪೊಲೀಸರ ಮೇಲೆ ದಾಂಧಲೆ ಎಸಗಿದ್ದಾರೆ. ಈ ರೀತಿ ಆಗುವುದಾದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ? ಯಾರು ಸಹ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಪದೇಪದೆ ಹೇಳುತ್ತಿದ್ದೇನೆ. ಶಾಸಕರಾಗಿರಲಿ, ಸಂಸದರಾಗಿರಲಿ ಮತ್ಯಾರಾದರು ಆಗಲಿ. ಯಾರನ್ನು ಕೂಡ ಬಿಡುವುದಿಲ್ಲ. ಅವರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.
ದಾವಣಗೆರೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯತೋರಿದ ಇನ್ಸ್‌ಪೆಕ್ಟರ್, ಪಿಎಸ್‌ಐ ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಕ್ರಮ ತೆಗೆದುಕೊಂಡಿಲ್ಲ ಎಂದರು.
ಮೃತನು ಮಟ್ಕಾ ಆಡಿಸುವುದರಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಠಾಣೆಗೆ ಕರೆದುಕೊಂಡು ಬಂದಿದ್ದರು. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಆತನ ಸಾವಿಗೆ ನಿಖರವಾದ ಕಾರಣ ಗೊತ್ತಾಗಲಿದೆ ಎಂದು ತಿಳಿಸಿದರು.
ಮಟ್ಕಾ ಮಾಮೂಲು ವಸೂಲಿಗೆ ಪೀಡಿಸುತ್ತಿದ್ದರು ಎಂಬ ಆರೋಪದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತನಿಖೆಯಲ್ಲಿ ಎಲ್ಲವೂ ಗೊತ್ತಾಗುತ್ತದೆ. ಅಧಿಕಾರಿಗಳು ಆ ರೀತಿ ಭಾಗಿಯಾಗಿರುವುದು ಕಂಡು ಬಂದರೆ, ಅಂತವರ ವಿರುದ್ಧ ಸೇವೆಯಿಂದ ವಜಾಗೊಳಿಸುವ ಕ್ರಮ ತೆಗೆದುಕೊಳ್ಳುತ್ತೇವೆ. ಅಂತವರು ಅಧಿಕಾರದಲ್ಲಿರಬಾರದು ಎಂದು ಹೇಳಿದರು.
ಕರ್ನಾಟಕ ಬಿಹಾರವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳು ಹೇಗಿದ್ದಾವೆ ಎಂಬುದನ್ನು ನೋಡಿಕೊಳ್ಳಲಿ. ಗುಜುರಾತ್‌ನಲ್ಲಿ ಬೆಂಕಿಹೊತ್ತಿಕೊಂಡು 27 ಜನ ಸತ್ತಿದ್ದಾರೆ. ಅದಕ್ಕೆ ಯಾರು ಹೊಣೆ? ಅಲ್ಲಿನ ಮುಖ್ಯಮಂತ್ರಿ, ಗೃಹ ಸಚಿವರು ರಾಜೀನಾಮೆ ಕೊಡಬೇಕಲ್ಲ? ಹೇಳೋದು ಬಹಳ ಸುಲಭವಾಗಿರುತ್ತದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಯನ್ನು ಹಾಳಾಗಲು ಬಿಡುವುದಿಲ್ಲ ಎಂದು ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
