ಬೆಂಗಳೂರು:ಶಾಸಕ ಬಸನಗೌಡ ಯತ್ನಾಳ ಅವರನ್ನು ರಾಜಕೀಯವಾಗಿ ಮುಗಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅವರ ಕಬ್ಬಿನ‌ ಕಾರ್ಖಾನೆಗೆ ಅನುಮತಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬೊಮ್ಮಾಯಿ ಆರೋಪಿಸಿದ್ದಾರೆ.
ಇದನ್ನೂ ಓದಿ:ಫೆಮಾ ಪ್ರಕರಣ: ಡಿಎಂಕೆ ಸಂಸದನ ಕುಟುಂಬಕ್ಕೆ 908 ಕೋಟಿ ರೂ. ದಂಡ ವಿಧಿಸಿದ ಇಡಿ!
ಮಾಲಿನ್ಯ ನಿಯಂತ್ರಣ ಮಂಡಳಿ ಅನ್ಯಾಯದ ವಿರುದ್ಧ ಶಾಸಕ ಬಸವನಗೌಡ ಪಾಟೀಲ್ ಅವರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು, ನ್ಯಾಯ ಸತ್ತು ಹೋಗಿದೆ, ದ್ವೇಷದ ರಾಜಕಾರಣ ನಡೆಯುತ್ತಿದೆ‌ ಎಂದು ದೂರಿದರು.
ಎಲ್ಲವೂ ಕಾನೂನು ಪ್ರಕಾರ ಮಾಡಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಕ್ಕರೆ ಕಾರ್ಖಾನೆ ಆರಂಭ ಮಾಡಿದ್ದಾರೆ. ಆದರೆ, ಕಳೆದ ವರ್ಷ ಇವರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಖಾನೆಗೆ ಅನುಮತಿ ಕೊಡಲಿಲ್ಲ. ಆಗ ಇವರು ಕೋರ್ಟ್ ಮೊರೆ ಹೋದರು, ಕೋರ್ಟ್ ನಾಲ್ಕು ವಾರದೊಳಗೆ ಕಾರ್ಖಾನೆ ಪುನಾರಂಭಕ್ಕೆ ಆದೇಶ ಕೊಟ್ಟಿತು. ಆದರೆ, ಮಾಲಿನ್ಯ ನಿಯಂತ್ರಣ ಮಂಡಳಿಯವರು ತಾಂತ್ರಿಕ ಕಾರಣದ ನೆಪ ಹೆಳುತ್ತಿದ್ದಾರೆ. ಯತ್ನಾಳ್ ಅವರನ್ನು ರಾಜಕೀಯವಾಗಿ ಮುಗಿಸಬೇಕು ಅಂತ ಅನುಮತಿ ಕೊಡುತ್ತಿಲ್ಲ ಎಂದು ಆರೋಪಿಸಿದರು.
ಮಾಲಿನ್ಯ ನಿಯಂತ್ರಣ ಮಂಡಳಿ ಬಹಳ ದೊಡ್ಡ ತಾರತಮ್ಯ ಮಾಡುತ್ತಿದೆ. ಹಲವು ಸಕ್ಕರೆ ಕಾರ್ಖಾನೆಗಳಿಗೆ ಅನುಮತಿ ಕೊಟ್ಟು, ಇವರಿಗೆ ತಾರತಮ್ಯ ಮಾಡಲಾಗುತ್ತಿದೆ. ಪಿಸಿಬಿ ಕಾನೂನು ಉಲ್ಲಂಘಿಸಿದ ಕಾರ್ಖಾನೆಗಳಿಗೆ ಅನುಮತಿ ಕೊಟ್ಟಿದೆ ಎಂದು ಹೇಳಿದರು.
ನಾವು ಇದನ್ನು ಇಲ್ಲಿಗೇ ಬಿಡುವುದಿಲ್ಲ, ಹೋರಾಟ ಮಾಡುತ್ತೇವೆ. ಈ ಕಾರ್ಖಾನೆ ನಂಬಿ ಸಾವಿರಾರು ರೈತರು ಇದ್ದಾರೆ. ಈ ಸಲ ಆ ಭಾಗದಲ್ಲಿ ಹೆಚ್ಚು ಕಬ್ಬು ಬೆಳೆದಿದ್ದಾರೆ, ಈ ಕಾರ್ಖಾನೆ ತೆರೆಯಬೇಕಿದೆ. ಸರ್ಕಾರ ಒಂದು ಕಡೆ ಉತ್ತರ ಕರ್ನಾಟಕದ ಕಡೆಗೆ ಕೈಗಾರಿಕೆಗಳು ಬರಬೇಕು ಅಂತ ಹೇಳುತ್ತದೆ. ಆದರೆ, ಇನ್ನೊಂದು ಕಡೆ ಈ ರೀತಿಯ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ; ಮೆಹಬೂಬಾ ಮುಫ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 13 =
Remember me
