ಬೆಂಗಳೂರು:ಅಸಮಾಧಾನಿತ ಶಾಸಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಸೂಚಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಅನುದಾನ, ಸಾರ್ವತ್ರಿಕ ವರ್ಗಾವಣೆ ರದ್ದು ಸೇರಿ ಅನೇಕ ವಿಚಾರದಲ್ಲಿ ಆಡಳಿತ ಪಕ್ಷದ ಶಾಸಕರು ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಆಕ್ರೋಶಗೊಂಡಿದ್ದು, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ. ನಮ್ಮ ಅನೇಕ ಪ್ರಸ್ತಾವನೆಗಳು ಮುಖ್ಯಮಂತ್ರಿ ಅವರನ್ನು ತಲುಪುವುದೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು ಸಲ್ಲಿಸಿದ್ದಾರೆ.
ಶಾಸಕರು ಅಸಮಾಧಾನ ತೋಡಿಕೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಸಚಿವರು ಪ್ರವಾಸ ಮಾಡುವ ಸಂದರ್ಭದಲ್ಲಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಮಾಹಿತಿ ನೀಡಬೇಕು. ಪಕ್ಷದ ಜಿಲ್ಲಾಧ್ಯಕ್ಷರು ಹಾಗೂ ಮುಖಂಡರಿಗೂ ಮಾಹಿತಿ ಇರಬೇಕೆಂದು ಹೇಳಿದ್ದಾರೆ.
ಶಾಸಕರು ಸಚಿವರ ಕಚೇರಿಗೆ ಬಂದಾಗ ಅವರಿಗೆ ನೆರವಾಗುವ ರೀತಿಯಲ್ಲಿ ನಡೆದುಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.
ಶಾಸಕರ ಅಸಮಾಧಾನ:ಗುರುವಾರ ರಾತ್ರಿ ವಿವಿಧ ಜಿಲ್ಲೆಗಳ ಶಾಸಕರು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಅಸಮಾಧಾನ ಹೊರ ಹಾಕಿದ್ದರು. ಸರ್ಕಾರ ಈ ವರ್ಷ ಸಾರ್ವತ್ರಿಕ ವರ್ಗಾವಣೆ ರದ್ದು ಮಾಡಿದೆ. ನಮ್ಮ ಕ್ಷೇತ್ರಕ್ಕೆ ಬೇಕಾದ ಅಧಿಕಾರಿಗಳನ್ನು ಹಾಕಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ನಾವು ಶಾಸಕರಾಗಿದ್ದು ಪ್ರಯೋಜನವಾದರೂ ಏನು ಎಂದು ಪ್ರಶ್ನಿಸಿದರೆನ್ನಲಾಗಿದೆ.
ಮುಖ್ಯಮಂತ್ರಿ ಹಾಗೂ ಬಹುತೇಕ ಸಚಿವರು ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸಚಿವರ ಪ್ರವಾಸದ ಮಾಹಿತಿಯೂ ನಮ್ಮ ಗಮನಕ್ಕೆ ಬರುವುದಿಲ್ಲ. ಕೆಲ ಸಚಿವರ ಕಚೇರಿಯಲ್ಲಿ ಶಾಸಕರಿಗೆ ಸಿಗಬೇಕಾದ ಕನಿಷ್ಠ ಗೌರವವೂ ಸಿಬ್ಬಂದಿಯಿಂದ ಸಿಗುವುದಿಲ್ಲವೆಂದು ಬೇಸರ ವ್ಯಕ್ತಪಡಿಸಿದರೆಂದು ಹೇಳಲಾಗಿದೆ.
ಶಾಸಕಾಂಗ ಪಕ್ಷದ ಸಭೆ:ಶಾಸಕರ ಅಸಮಾಧಾನದ ಹಿನ್ನೆಲೆಯಲ್ಲಿ ಕರೊನಾ ಸಮಸ್ಯೆ ನಿಯಂತ್ರಣಕ್ಕೆ ಬಂದ ಕೂಡಲೇ ಶಾಸಕಾಂಗ ಪಕ್ಷದ ಸಭೆ ಕರೆದು ಚರ್ಚೆ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.
ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿಲ್ಲ:ನಾಯಕತ್ವ ಬದಲಾವಣೆ, ವರ್ಗಾವಣೆ ರದ್ದುಗೊಳಿಸಿದ ಬಗ್ಗೆ ನಾವು ಚರ್ಚೆ ಮಾಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವುಗಳು ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ ಮಾಡಿದ್ದು ನಿಜ. ಅಭಿವೃದ್ಧಿ ವಿಚಾರ ಹಾಗೂ ಅನುದಾನ ಬಗ್ಗೆ ಮಾತನಾಡಿದ್ದೇವೆ. ಅದು ಭಿನ್ನಮತ, ಷಡ್ಯಂತ್ರ ಆಗುವುದಿಲ್ಲ. ನಾವು ಶಾಸಕರಾಗಿ, ನಮ್ಮ ಅಧ್ಯಕ್ಷರಿಗೆ ಮಾಹಿತಿ ನೀಡೋದು, ಒಳ್ಳೇ ಕೆಲಸದ ಬಗ್ಗೆ ಸಿಎಂ ಹಾಗೂ ಅಧ್ಯಕ್ಷರಿಗೆ ಅಭಿನಂದನೆ ತಿಳಿಸೋದು ಕರ್ತವ್ಯ ಎಂದರು. ಸಾಫ್ಟ್ ಆಗಿದ್ದಾರೆ ಅನ್ನೋ ಪ್ರಶ್ನೆಗೆ ಕಾಲಾಯ ತಸ್ಮೈ ನಮಃ ಎಂದ ಯತ್ನಾಳ್, ಯಾವಾಗ ಬಗ್ಗಬೇಕೋ, ಯಾವಾಗ ಬಾಗಬೇಕು,ಯಾವಾಗ ಸೆಟೆದು ನಿಲ್ಲಬೇಕು ಎಲ್ಲವೂ ತಿಳಿದಿದೆ. ಈಗ ತಲೆಬಾಗಿದ್ದೀನಿ ಅಂದ್ರೇ ಮುಂದೆ ಒಳ್ಳೆಯ ನಿರ್ಣಯ ಆಗುತ್ತೆ ಅಂತ ತಲೆ ಬಾಗಿದ್ದೀನಿ ಎಂದರ್ಥ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
