ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಬೆಂಗಳೂರು ಹಾಗೂ ದೆಹಲಿಯಲ್ಲಿ ಉಚಿತ ವಸತಿ ವ್ಯವಸ್ಥೆ ಕಲ್ಪಿಸುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ‌ ನೀಡಿದ್ದಾರೆ.
ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಶುಕ್ರವಾರ ವಿವಿಧ ನಿಗಮದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸಚಿವರು ಈ ಸೂಚನೆ ನೀಡಿದರು.
ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ‌‌ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ದೆಹಲಿ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸುವಂತೆ ಮನವಿ‌ ಮಾಡಿ ಬೇಡಿಕೆ ಸಲ್ಲಿಸಿದ್ದಾರೆ.
ಗ್ರಾಮೀಣ ಭಾಗದ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಸಂಬಂಧ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ, ವರದಿ ಸಿದ್ಧಪಡಿಸುವಂತೆ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.‌
ಇಲಾಖೆಯಲ್ಲಿನ ಶೈಕ್ಷಣಿಕ ಸಾಲ, ಸ್ವಾವಲಂಬಿ ಸಾಲ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಪ್ರತಿಯೊಂದು ಯೋಜನೆಗಳು ಜನರಿಗೆ ಪರಿಣಾಮಕಾರಿಯಾಗಿ ತಲುಪಬೇಕು. ಇಲಾಖೆ ವ್ಯಾಪ್ತಿಗೆ ಬರುವ ನಿಗಮಗಳ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯೇ ಇಲ್ಲ. ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯಲ್ಲಿನ ಯೋಜನೆಗಳ ಬಗ್ಗೆ ರಾಜ್ಯದ ಜನರಿಗೆ ಮಾಹಿತಿ ಒದಗಿಸಬೇಕು. ಈ ಬಗ್ಗೆ ಅಧಿಕಾರಿಗಳು ಗಮನವಹಿಸಬೇಕು ಎಂದು ಸಚಿವರು ತಿಳಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 − nine =
Remember me
