ಬೆಂಗಳೂರು:ಬೆಂಗಳೂರಿನ ನಾಗರಿಕರೇ ಗಮನಿಸಿ, ಪ್ರತಿದಿನ ಲಕ್ಷಾಂತರ ಪ್ರಯಾಣಿಕರ ಒಡನಾಡಿಯಾಗಿರುವ ನಮ್ಮ ಮೆಟ್ರೋ ಮಹತ್ವದ ಸೂಚನೆಯೊಂದನ್ನು ಬಿಡುಗಡೆ ಮಾಡಿದೆ. ಮೆಟ್ರೋ ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಜೂನ್ 17ರಂದು (ಸೋಮವಾರ) ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಇದನ್ನೂ ಓದಿ:ಬಿಎಸ್​ವೈ ವಿಚಾರಣೆಗಳಿಗೆ ಬೆನ್ನು ತೋರಿಸುವ ಜಾಯಮಾನದವರಲ್ಲ: ಪುತ್ರ ಬಿವೈ ವಿಜಯೇಂದ್ರ ಟ್ವೀಟ್‌
ಮೆಟ್ರೋ ನಿರ್ವಹಣಾ ಕಾರ್ಯದ ಹಿನ್ನೆಲೆ ಅಂದು ಕೆಂಗೇರಿಯಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣದ ನಡುವೆ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ಬಿಎಂಆರ್​ಸಿಎಲ್​ ಪ್ರಕಟಣೆ ಮೂಲಕ ಪ್ರಯಾಣಿಕರಿಗೆ ಸೂಚನೆ ನೀಡಿದೆ.

ಕಾಮಗಾರಿ ನಡೆಯುವುದರಿಂದ ಕೆಂಗೇರಿ ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆ ಸೋಮವಾರದಂದು ಬೆಳಗ್ಗೆ 5 ರಿಂದ ಮಧ್ಯಾಹ್ನ 1 ಗಂಟೆವರೆಗೂ ಸ್ಥಗಿತಗೊಳ್ಳಲಿವೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಾಹ್ನ ಒಂದು ಗಂಟೆಯ ಬಳಿಕ ಚಲ್ಲಘಟ್ಟ to ವೈಟ್‌ಫೀಲ್ಡ್ ನಡುವೆ ಮೆಟ್ರೋ ಸಂಚಾರ ಪ್ರಯಾಣಕರಿಗೆ ಲಭ್ಯವಿರಲಿದೆ. ಆದಾಗ್ಯೂ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಇರಲಿದೆ. ಪ್ರಯಾಣಿಕರ ಅನಾನುಕೂಲಕ್ಕೆ ವಿಷಾದಿಸುತ್ತೇವೆಂದು ಬಿಎಂಆರ್​​ಸಿಎಲ್ ತಿಳಿಸಿದೆ.
ಶಾಸಕ ಸ್ಥಾನದಿಂದ ಮಾಜಿ ಸಚಿವ ರಾಜ್ ಕುಮಾರ್ ಆನಂದ್ ಅನರ್ಹ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + twelve =
Remember me
