ಬೆಂಗಳೂರು: ಆನೇಕಲ್  ತಾಲೂಕು ಅತ್ತಿಬೆಲೆಯ ಪಟಾಕಿ ದುರಂತ ಪ್ರಕರಣವನ್ನು ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಹೇಳಿದ್ದಾರೆ.
ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತ ಸಾವು ಕಂಡಿರುವ ಘಟನೆಗೆ ದಿಗ್ಭ್ರಮೆ ವ್ಯಕ್ಯಪಡಿಸಿರುವ ಅವರು, ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ ಎಂದಿದ್ದಾರೆ.ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಆಸರೆಯಾಗಿ ನಿಲ್ಲಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 11 =
Remember me
