ಯಾದಗಿರಿ:ನಗರ ಸೈಬರ್​ ಠಾಣೆ ಪಿಎಸ್​ಐ ಪರಶುರಾಮ್​ ಅವರ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಘಟನೆ ನಡೆದು 17 ಗಂಟೆಗಳ ಬಳಿಕ ಅವರ ಪತ್ನಿ ಶ್ವೇತಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರ ಪತ್ನಿ ನೀಡಿದ ದೂರಿನ ಆಧಾರದ ಮೇರೆಗೆ ಪೊಲೀಸರು ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ  ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ ​​ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರಂತೆ​ 352, 108 (3), 5, ಬಿಎನ್ಎಸ್ 2023 ಮತ್ತು ಕಲಂ 3(1), (ಆರ್), (ಎಸ್), 3 (ವಿ) ಸೇರಿದಂತೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಇತ್ತ ಪೊಲೀಸ್​ ಅಧಿಕಾರಿಯ ಸಾವು ಆಡಳಿತ ಹಾಗೂ ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದು, ಶಾಸಕರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಒಬ್ಬ ದಲಿತ ಅಧಿಕಾರಿಯ ವರ್ಗಾವಣೆಗೆ ಪ್ರಭಾವ ಬೀರಿದ ಚನ್ನಾರೆಡ್ಡಿ ಅವರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಜನಪ್ರತಿನಿಧಿಯಾಗಿ ಮಾದರಿಯಾಗಿರಬೇಕಾಗಿದ್ದ ಶಾಸಕರು ಒಬ್ಬ ಅಧಿಕಾರಿಯ ಸಾವಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ. ಚನ್ನಾರೆಡ್ಡಿ ಅವರು ಕೂಡಲೇ ಈ ಸಾವಿಗೆ ನೈತಿಕ ಹೊಣೆ ಹೊತ್ತು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಮನು ಭಾಕರ್​ ಹ್ಯಾಟ್ರಿಕ್​ ಕನಸು ಭಗ್ನ; ಕೂದಲೆಳೆ ಅಂತರದಲ್ಲಿ ಕೈ ತಪ್ಪಿತ್ತು ಪದಕ
ಜೆಡಿಎಸ್​ ಶಾಸಕ ಶರಣಗೌಡ ಕಂದಕೂರ್ ಪ್ರತಿಕ್ರಿಯಿಸಿ, ಮೂರು ದಿನಗಳ ಹಿಂದೆಯಷ್ಟೇ ವರ್ಗಾವಣೆ ಬಗ್ಗೆ ನನ್ನ ಜೊತೆ ಮಾತಾಡಿದ್ದರು. ಒಂದು ವರ್ಷ ಕೂಡ ಆಗಿಲ್ಲ ಮತ್ತೆ ವರ್ಗಾವಣೆ ಮಾಡಿದ್ದಾರೆ ಎಂದಿದ್ದರು. ಮೃತ ಪಿಎಸ್​ಐ ಪರಶುರಾಮ್ ಪತ್ನಿ ತುಂಬು ಗರ್ಭಿಣಿ, ಈ ರೀತಿಯಾದರೆ ಪ್ರಾಮಾಣಿಕ ಅಧಿಕಾರಿಗಳು ಏನು ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.
ಸದನದೊಳಗೆ ಮತ್ತು ಹೊರಗೂ ಯಾದಗಿರಿ ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ಬಗ್ಗೆ ಪ್ರಸ್ತಾಪಿಸಿದ್ದೆ. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು, ಆದರೂ ಕ್ರಮ ಕೈಗೊಂಡಿಲ್ಲ. ಪಿಎಸ್​ಐ ಸಾವಿಗೆ ಅಧಿಕಾರಿಗಳು ಹೊಣೆನಾ? ಮೇಲಧಿಕಾರಿಗಳು ಹೊಣೆನಾ? ಪರಶುರಾಮ್ ಸಾವು ಕೇಸ್ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಉನ್ನತಮಟ್ಟದ ತನಿಖೆಗೆ ಆಗ್ರಹಿಸಿ ಈಗಾಗಲೇ ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ. ಮೃತ ಪರಶುರಾಮ್ ಕುಟುಂಬಕ್ಕೆ ಸರ್ಕಾರ ಪರಿಹಾರ ಕೊಡಬೇಕು. ನನ್ನ ಎರಡು ತಿಂಗಳ ಸಂಬಳ ಮೃತ ಪರಶುರಾಮ ಕುಟುಂಬಕ್ಕೆ ನೀಡುತ್ತೇನೆ ಎಂದು ಜೆಡಿಎಸ್​ ಶಾಸಕ ಶರಣಗೌಡ ಕಂದಕೂರ್​ ಹೇಳಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:14 + 4 =
Remember me
