ನವದೆಹಲಿ:ಕರ್ನಾಟಕದ ಹೆಸರಾಂತ ಸಾಹಿತಿ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸಾಹಿತ್ಯ ಅಕಾಡೆಮಿಯು ತನ್ನ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 24 ಭಾಷೆಗಳಲ್ಲಿ ಇಂದು (ಡಿ.20) ಪ್ರಕಟಿಸಿದೆ. ಇದರಲ್ಲಿ 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಮತ್ತು 1 ಸಾಹಿತ್ಯ ಅಧ್ಯಯನಗಳು 2023ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಗೆದ್ದಿವೆ.
ಲಕ್ಷ್ಮೀಶ ತೋಳ್ಪಾಡಿ ಅವರು ಬರೆದ “ಮಹಾಭಾರತ ಅನುಸಂಧಾನದ ಭಾರತಯಾತ್ರೆ” ಪ್ರಬಂಧಗಳಿಗೆ ಈ ವಿಶೇಷ ಗೌರವ ಅರಸಿ ಬಂದಿದೆ.
ಲಕ್ಷ್ಮೀಶ ತೋಳ್ಪಾಡಿ ಪರಿಚಯಅಂದಹಾಗೆ ಲಕ್ಷ್ಮೀಶ ತೋಳ್ಪಾಡಿ ಅವರು ಲೇಖಕ, ಚಿಂತಕ ಮತ್ತು ವಿದ್ವಾಂಸರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಾಂತಿಗೋಡು ಗ್ರಾಮದವರು. ಇವರ ಆಡುಭಾಷೆ ತುಳು. ಇವರು ತಾರುಣ್ಯದಲ್ಲಿ ಕೆಲ ಕಾಲ ಬೆಂಗಳೂರಿನಲ್ಲಿದ್ದರು. ವೈ.ಎನ್.ಕೆ, ಗೋಪಾಲಕೃಷ್ಣ ಅಡಿಗ, ಲಂಕೇಶ ಪತ್ರಿಕೆ, ಕಿ.ರಂ. ನಾಗರಾಜ ಅವರ ಒಡನಾಟ ಇವರಿಗೆ ಸಿಕ್ಕಿತ್ತು.
ಲಕ್ಷ್ಮೀಶ ಅವರದು ಕವಿ ಹೃದಯ, ಮಾತಿನಲ್ಲಿಯೂ ಮೌನದಲ್ಲಿಯೂ ಕಥನಕ್ಕಿಂತ ಕಾವ್ಯವೇ ಹೆಚ್ಚು. ನಾಡಿನ ಹಲವು ಪತ್ರಿಕೆಗಳಲ್ಲಿ ಅವರ ಲೇಖನಗಳು ಪ್ರಕಟವಾಗಿವೆ. ಭಗವದ್ಗೀತೆಯ ಬಗೆಗಿನ ‘ಮಹಾಯುದ್ದಕ್ಕೆ ಮುನ್ನ’ ಮೊದಲ ಪ್ರಕಟಿತ ಕೃತಿ. ಈ ಕೃತಿಯ ಬಗ್ಗೆ ಬಂದಿರುವ ಪತ್ರಿಕಾ ವಿಮರ್ಶೆಯಲ್ಲಿ ‘ಆಧುನಿಕನಿಗೆ ಹೃದಯಸ್ಪರ್ಶಿ’ ಎಂಬ ಮೆಚ್ಚುಗೆ ವ್ಯಕ್ತವಾಗಿತ್ತು. ಅಂತರ್ಜಾಲ ಪತ್ರಿಕೆಯಲ್ಲಿ ಭಾಗವತದ ಬಗ್ಗೆ ಬರೆದ ಸರಣಿ ಬರಹಗಳ ಸಂಕಲನ ‘ಸಂಪಿಗೆ ಭಾಗವತ’, ‘ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ’, ‘ಭವ ತಲ್ಲಣ’ (ತಾಳಮದ್ದಲೆ ಕುರಿತು) ಕೃತಿಗಳು ಪ್ರಕಟವಾಗಿವೆ.
ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮಾಧವ್ ಕೌಶಿಕ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ 24 ಭಾರತೀಯ ಭಾಷೆಗಳಲ್ಲಿ ಪ್ರತಿಷ್ಠಿತ ತೀರ್ಪುಗಾರರ ಸದಸ್ಯರು ಶಿಫಾರಸು ಮಾಡಿದ ಪ್ರಶಸ್ತಿಗಳನ್ನು ಸಾಹಿತ್ಯ ಅಕಾಡೆಮಿಯ ಕಾರ್ಯಕಾರಿ ಮಂಡಳಿಯು ಅನುಮೋದಿಸಿತು.
ನಾಯಕತ್ವದಿಂದ ರೋಹಿತ್​ ಶರ್ಮಾಗೆ ಕೊಕ್; ಮುಂಬೈ ಇಂಡಿಯನ್ಸ್​ ಕೊಟ್ಟ ಸ್ಪಷ್ಟನೆ ಹೀಗಿತ್ತು

“ನನ್ನ ಜಾತಿ ಮೇಲೂ ಹಲ್ಲೆ ನಡೆದಿದೆ,ಆದರೆ..”: ಜಗದೀಪ್ ಧನ್ಖರ್ ‘ಅವಮಾನ’ಕ್ಕೆ ಖರ್ಗೆ ಪ್ರತಿಕ್ರಿಯೆ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:2 × five =
Remember me
