ರಾಮನಗರ:ನನ್ನ ಅಂತ್ಯಕ್ರಿಯೆಯಲ್ಲಿ ನೀವು ಭಾಗಿಯಾಗಬೇಕೆಂದು ಸಾವಿಗೂ ಮುನ್ನ ಡೆತ್​ನೋಟ್​ ಬರೆದಿಟ್ಟು ಕೊನೆಯುಸಿರೆಳೆದಿದ್ದ ಆಟೋ ಚಾಲಕನ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಆಟೋ ಚಾಲಕನ ಕೊನೆಯ ಆಸೆಯನ್ನು ನೆರವೇರಿಸಿದರು.
ಆಟೋ ಚಾಲಕ ಜಯರಾಮು ಅನಾರೋಗ್ಯದಿಂದ ಶನಿವಾರ ಮೃತಪಟ್ಟಿದ್ದರು. ರಾಮನಗರ ತಾಲೂಕಿನ ಬೊಮ್ಮಚನಹಳ್ಳಿ ಗ್ರಾಮದಲ್ಲಿ ನಡೆದ ಅವರ ಅಂತಿಮ ಸಂಸ್ಕಾರದಲ್ಲಿ ಎಚ್​.ಡಿ. ಕುಮಾರಸ್ವಾಮಿ ಅವರು ತಮ್ಮ ಮಗ ನಿಖಿಲ್​ ಕುಮಾರಸ್ವಾಮಿ​ ಜತೆ ಭಾಗವಹಿಸಿದರು.
ಇದನ್ನೂ ಓದಿ:ಪಂಚರ್​ ಟೈಯರ್​ನಲ್ಲೇ ಪತ್ನಿ ಮನೆಗೆ ಪ್ರಯಾಣ ಬೆಳೆಸಿದ ಯುವಕನಿಗೆ ಕಾದಿತ್ತು ಶಾಕ್​! ಅಪಘಾತವಂತೂ ಅಲ್ಲ
ಜಯರಾಮು ಸಾವಿಗೂ ಮುನ್ನವೇ ತನ್ನ ಅಂಗಿಯಲ್ಲಿ ಡೆತ್ ನೋಟ್ ಬರೆದಿಟ್ಟುಕೊಂಡಿದ್ದರು. ನನ್ನ ಅಂತ್ಯಕ್ರಿಯೆಯಲ್ಲಿ‌ ಮಾಜಿ ಸಿಎಂ ಎಚ್​ಡಿಕೆ ಭಾಗಿಯಾಗಬೇಕು. ನನಗೆ ಬುದ್ಧಿಮಾಂದ್ಯ ಮಗನಿದ್ದಾನೆ. ಆತನಿಗೆ ಕುಮಾರಸ್ವಾಮಿ ಧನ ಸಹಾಯ ಮಾಡಬೇಕು. ನಿಮ್ಮ ಋಣವನ್ನು ಮುಂದಿನ ಜನ್ಮದಲ್ಲಿ ತೀರಿಸುತ್ತೇನೆ. ನನ್ನ ಮಗನಿಗೆ ಒಂದು ದಾರಿ ಮಾಡಿಕೊಡಿ ಕುಮಾರಣ್ಣ ಅಂತಾ ಭಾವನಾತ್ಮಕವಾಗಿ ಡೆತ್ ನೋಟ್ ಬರೆದಿಟ್ಟಿದ್ದರು.
ಜಯರಾಮುವಿನ ಕೊನೆಯ ಮಾತಿನಂತೆ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಮೃತ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬಳಿಕ ನಿಖಿಲ್,​ ಕುಟುಂಬಸ್ಥರಿಗೆ ಪರಿಹಾರದ ಹಣ ನೀಡಿದರು.(ದಿಗ್ವಿಜಯ ನ್ಯೂಸ್​)
ಉಚಿತವಾಗಿ ಸಿಗಲ್ಲ ಅನ್ನಭಾಗ್ಯ ಅಕ್ಕಿ?

ಹೃತಿಕ್​​- ಕಂಗನಾ ನಡುವೆ ಲೈಂಗಿಕ ಸಂಬಂಧ: ಗೋಸ್ವಾಮಿ ಚಾಟ್​ ಸೋರಿಕೆ

ಕಾಂಡೋಮ್​ ಚಿತ್ರವನ್ನು ಟ್ವೀಟ್ ಮಾಡಿ ಹಿಂದು ಭಾವನೆಗೆ ಧಕ್ಕೆ ತಂದ ನಟಿ ವಿರುದ್ಧ ಭಾರೀ ಆಕ್ರೋಶ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + six =
Remember me
