ಬೆಂಗಳೂರು: ಬಟ್ಟೆಯಲ್ಲಿ ಸುತ್ತಿ ಎಸೆದಿದ್ದ ನವಜಾತ ಶಿಶುವನ್ನು ನಾಯಿಗಳಿಂದ ರಕ್ಷಿಸಿದ ಆಟೋ ಚಾಲಕನೊಬ್ಬ ಅದನ್ನು ಆಸ್ಪತ್ರೆಗೆ ದಾಖಲಿಸಿ ಪ್ರಾಣ ಉಳಿಸಿದ್ದಾನೆ. ಯಶವಂತಪುರ ಸುಬೇದಾರ್‌ಪಾಳ್ಯದ ನಿವಾಸಿ ನಾಗರಾಜ್ (32) ಶಿಶುವನ್ನು ರಕ್ಷಿಸಿದ ಚಾಲಕ.
ಯಶವಂತಪುರ ತ್ರಿವೇಣಿ ರಸ್ತೆಯಲ್ಲಿರುವ ಬಾಪು ಕಾಲೇಜಿನ ಬಳಿ ಭಾನುವಾರ ಬೆಳಗಿನ ಜಾವ 4.30ರಲ್ಲಿ ನಾಗರಾಜ್ ಆಟೋದಲ್ಲಿ ತೆರಳುತ್ತ್ತಿದ್ದಾಗ ಮಗು ಅಳುವ ಶಬ್ದ ಕೇಳಿ ಬಂದಿತ್ತು. ಹತ್ತಿರ ಹೋಗಿ ನೋಡಿದಾಗ ಬಟ್ಟೆಯಲ್ಲಿ ಸುತ್ತಿದ್ದ ಮಗುವನ್ನು ಬೀದಿ ನಾಯಿಗಳು ಎಳೆದಾಡುತ್ತಿರುವುದು ಕಂಡು ಬಂದಿತ್ತು. ನಾಯಿಗಳನ್ನು ಓಡಿಸಿ, ಬಟ್ಟೆಯಲ್ಲಿ ಕಟ್ಟಿರುವುದನ್ನು ಬಿಚ್ಚಿ ನೋಡಿದಾಗ ಅದರಲ್ಲಿ ನವಜಾತ ಗಂಡು ಶಿಶು ಪತ್ತೆಯಾಗಿತ್ತು. ಕೂಡಲೇ ನಾಗರಾಜ್ ಶಿಶುವನ್ನು ಚಿಕಿತ್ಸೆಗಾಗಿ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿದ್ದರು. ಶಿಶು ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ನಾಗರಾಜ್ ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಯಶವಂತಪುರ ಪೊಲೀಸರು, ಮಗುವನ್ನು ಎಸೆದು ಹೋದವರು ಯಾರೆಂಬುದರ ಪತ್ತೆಗೆ ಮುಂದಾಗಿದ್ದಾರೆ.
ಆಟೋ ಚಾಲಕನ ಕಾರ್ಯಕ್ಕೆ ಮೆಚ್ಚುಗೆ:ಮಗು ಪತ್ತೆಯಾದ ಸ್ಥಳದ ಆಸು-ಪಾಸಿನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಆರೋಪಿಗಳು ಮಗುವನ್ನು ಎಸೆಯುವ ದೃಶ್ಯ ಸೆರೆಯಾಗಿದೆ. ಆದರೆ, ಅವರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಒಂದು ವೇಳೆ ನಾಗರಾಜ್ ಶಿಶುವನ್ನು ರಕ್ಷಿಸದಿದ್ದರೆ ನಾಯಿಗಳು ಕಚ್ಚಿ ತಿಂದು ಹಾಕುತ್ತಿದ್ದವು. ಆಟೋ ಚಾಲಕನ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಸಿಕ್ಕಸಿಕ್ಕ ನಂಬರ್‌ಗೆ ಕರೆ ಮಾಡಿ ಹಣ ಕಳಕೊಂಡ್ರು!…ಆನ್‌ಲೈನ್ ಖರೀದಿದಾರರಿಗೆ ಕಂಟಕವಾದ ಸೈಬರ್ ಕಳ್ಳರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
