ಬೆಂಗಳೂರು: ವಿಶೇಷ ಚೇತನರಿಗಾಗಿ ಸಲ್ಲಿಸಿದ ಸೇವೆಗಾಗಿ ಹಿರಿಯ ಪತ್ರಕರ್ತ ಜೆ ಪಿ ಗಡ್ಕರಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಪ್ರದಾನ ಮಾಡಿದರು.ಪರಿವಾರ -ಕುಟುಂಬ-ರಾಷ್ಟ್ರೀಯ ಪೋಷಕರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ರಾಜಭವನದ ಬಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಿದರು.ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ವಿಶೇಷ ಚೇತನರ ಸಬಲೀಕರಣ ಮತ್ತು ಪುನರ್ವಸತಿಗಾಗಿ ತನ್ನ ಸಂಪೂರ್ಣ ಜೀವನವನ್ನು ಮುಡಿಪಾಗಿಟ್ಟ ವ್ಯಕ್ತಿಯನ್ನು ಗೌರವಿಸಿರುವುದು ಬಹಳ ಸಂತಸ ತಂದಿದೆ. 92ನೇ ವಯಸ್ಸಿನಲ್ಲೂ ಜೆ ಪಿ ಗಡ್ಕರಿ ಅವರು ವಿಶೇಷ ಚೇತನರ ಅಭಿವೃದ್ಧಿಗಾಗಿ ತಮ್ಮನ್ನು ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.ಕಾರ್ಯಕ್ರಮದಲ್ಲಿ ಪರಿವಾರ ಕುಟುಂಬ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಪಂಕಜ್ ಮಾರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × 1 =
Remember me
