ಬೆಂಗಳೂರು:ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆಯನ್ನು ರಾಜ್ಯದಾದ್ಯಂತ ವಿತರಿಸುವ ಕಾರ್ಯಕ್ರಮಕ್ಕೆ ನಗರದ ವಿವಿ ಪುರಂ ವಾಲ್ಮೀಕಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಚಾಲನೆ ದೊರೆಯಿತು.
ವಿಶ್ವ ಹಿಂದು ಪರಿಷತ್ ಸಂಘಟನೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಯೋಧ್ಯೆಯಿಂದ ರಾಜ್ಯಕ್ಕೆ ಆಗಮಿಸಿರುವ ಮಂತ್ರಾಕ್ಷತೆಯನ್ನು ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ತಲುಪಿಸಲಾಗಿದ್ದು, ಭಾನುವಾರ ಸಂಜೆ ಜಿಲ್ಲಾ ಕೇಂದ್ರದ ದೇವಾಲಯಗಳಲ್ಲಿ ಪೂಜೆ ನಡೆಯಲಿದೆ. ಬಳಿಕ ಎಲ್ಲಾ ತಾಲೂಕು ಕೇಂದ್ರಗಳ ಮೂಲಕ ರಾಜ್ಯದ 20ಸಾವಿರಕ್ಕೂ ಅಧಿಕ ಗ್ರಾಮಗಳಿಗೆ ಮಂತ್ರಾಕ್ಷತೆ ತಲುಪಿಸಲಾಗುವುದು ಎಂದು ವಿಹಿಂಪ ಮುಖಂಡರು ತಿಳಿಸಿದರು.
ಜನವರಿ 15ರೊಳಗೆ ರಾಜ್ಯದ ಪ್ರತಿ ಮನೆಗೂ ಮಂತ್ರಾಕ್ಷತೆ ಹಾಗೂ ಅಯೋಧ್ಯೆ ರಾಮ ಮಂದಿರದ ಚಿತ್ರಣವಿರುವ ಕರ ಪತ್ರ ತಲುಪಿಸಲಾಗುವುದು. ಈ ಸಂಬಂಧ ವಿಹಿಂಪ ಕರ್ನಾಟಕ ದಕ್ಷಿಣ 36 ಜಿಲ್ಲೆಗಳ (ವಿಹಿಂಪ ಜಿಲ್ಲೆಗಳು) ಪದಾಧಿಕಾರಿಗಳಿಗೆ ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿಗಳ ನೇತೃತ್ವದಲ್ಲಿ ಮಂತ್ರಾಕ್ಷತೆಯನ್ನು ಹಸ್ತಾಂತರ ಮಾಡಲಾಯಿತು. ಜ.22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನೆಯನ್ನು ದೇವಸ್ಥಾನಗಳಲ್ಲಿ ಎಲ್ಇಡಿ ಸ್ಕ್ರೀನ್ ಮೂಲಕ ಬಿತ್ತರಿಸಲಾಗುವುದು. ಅಂದು ಪ್ರತಿ ಮನೆ ಎದುರು ಐದು ದೀಪಗಳನ್ನು ಹಚ್ಚಬೇಕು ಎಂದು ವಿಹಿಂಪನ ಮುಖಂಡರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಅಧ್ಯಕ್ಷೆ ಡಾ. ವಿಜಯಲಕ್ಷ್ಮೀ ದೇಶಮಾನೆ, ಕಾಯಾಧ್ಯಕ್ಷ ಡಾ.ಪುರಾಣಿಕ್ ಇತರರು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
