ಮಂಡ್ಯ:ಕೆ.ಆರ್.ಪೇಟೆ ಪಟ್ಟಣದ ಹಳೇ ಕಿಕ್ಕೇರಿ ರಸ್ತೆಯಲ್ಲಿರುವ ಅನ್ನಪೂರ್ಣೇಶ್ವರಿ ಟೆಂಬರ್ ಅಂಗಡಿಯಲ್ಲಿ ಭಾನುವಾರ ತಡರಾತ್ರಿ ಶಾರ್ಟ್ ಸರ್ಕ್ಯೂಟ್ ಆದ ಪರಿಣಾಮ ಲಕ್ಷಾಂತರ ರೂ ಮೌಲ್ಯದ ಮರ ಹಾಗೂ ಯಂತ್ರೋಪಕರಣಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ. ಸ್ವ ಉದ್ಯೋಗದ ಕನಸಿನಲ್ಲಿ ಗಂಗಾಧರ ಎನ್ನುವವರ ಮಾಡಿದ್ದ ಅಂಗಡಿ ಬೆಂಕಿಗಾಹುತಿಯಾಗಿದೆ. ಅಂಗಡಿಯ ಪಕ್ಕದ ಮನೆಯವರು ಅವಘಡದ ಬಗ್ಗೆ ಮಾಲೀಕನಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಆತ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ಮುಟ್ಟಿಸಿ ಬರುವಷ್ಟರಲ್ಲಿ ಅಂಗಡಿ ಬೆಂಕಿಯಿಂದಾಗಿ ಹೊತ್ತಿ ಉರಿಯುತ್ತಿತ್ತು. ಅಗ್ನಿಶಾಮಕ ದಳದ ಠಾಣಾಧಿಕಾರಿ ಶ್ರೀನಿವಾಸರಾವ್ ಹಾಗೂ ಸಿಬ್ಬಂದಿ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಆಯುಧಪೂಜೆ ಹಬ್ಬ ಮಾಡಿ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಸಿಹಿ ವಿತರಿಸಿದ ಮಾಲೀಕನ ಕನಸು ಬೆಂಕಿಯಲ್ಲಿಯೇ ಸುಟ್ಟು ಹೋದಂತಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
