ಚಿಕ್ಕಮಗಳೂರು: ಜಗದ್ಗುರು ರೇಣುಕಾಚಾರ್ಯರ ಹೆಸರಿನಲ್ಲಿ ಬಾಳೆಹೊನ್ನೂರಿನಲ್ಲಿ ಆಯುರ್ವೆದ ಕೇಂದ್ರ ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೊಷಿಸಿದರು.
ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ಶನಿವಾರ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವ ಹಾಗೂ ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ರಂಭಾಪುರಿ ಶ್ರೀಗಳು ಶ್ರೀಮಠದ ಆವರಣದಲ್ಲಿ ಆಯುರ್ವೆದ ಕೇಂದ್ರ ಆರಂಭಿಸಬೇಕೆಂಬ ಇಚ್ಛೆ ವ್ಯಕ್ತಪಡಿಸಿದ್ದಾರೆ. ಅದಕ್ಕಾಗಿ ಅಗತ್ಯ ಹಣ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಸುಂದರ ಸಮಾಜಕ್ಕೆ ಶ್ರಮಿಸಿದ ರೇಣುಕರು: ಜಾತಿಗಿಂತ ನೀತಿಗೆ, ತತ್ವಕ್ಕಿಂತ ಆಚರಣೆಗೆ, ಮಾತಿಗಿಂತ ಕೃತಿಗೆ, ಬೋಧನೆಗಿಂತ ಸಾಧನೆಗೆ, ದಾನಕ್ಕಿಂತ ದಾಸೋಹಕ್ಕೆ, ಚರಿತ್ರೆಗಿಂತ ಚಾರಿತ್ರ್ಯ್ಕೆ ವಿಶೇಷ ಮಹತ್ವ ಕೊಟ್ಟು ಸುಂದರ ಸಮಾಜ ಕಟ್ಟಲು ಶ್ರಮಿಸಿದ ಕೀರ್ತಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ ಎಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.
ಪ್ರಶಸ್ತಿ ಸ್ವೀಕರಿಸಿದ ಬಸವರಾಜ ಉಮರಾಣಿ ಮಾತನಾಡಿ, ಇದು ನನ್ನ ಜೀವನದ ಮಹತ್ವದ ದಿನ. ನನ್ನಂಥವರನ್ನು ಗುರುತಿಸಿದ್ದು ಬಾಳೆಹೊನ್ನೂರು ಧರ್ಮ ಪೀಠದ ಹಿರಿಮೆಯಾಗಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + twelve =
Remember me
