ಬೆಂಗಳೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್​ಎಚ್​ಎಂ) ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯದ 676 ಆಯುಷ್ ವೈದ್ಯರಿಗೆ ಕನಿಷ್ಠ ವೇತನವೂ ಸಿಗದೆ ಸಂಕಷ್ಟದಲ್ಲಿ ಜೀವನ ನಡೆಸುವ ಪರಿಸ್ಥಿತಿ ಎದುರಾಗಿದೆ. ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಎನ್​ಎಚ್​ಎಂ ಅಡಿಯಲ್ಲಿ 16 ವರ್ಷಕ್ಕೂ ಹೆಚ್ಚು ಕಾಲದಿಂದ ಸೇವೆ ಸಲ್ಲಿಸುತ್ತಿರುವ ಆಯುಷ್ ವೈದ್ಯರಿಗೆ ಗೌರವಯುತ ವೇತನ ನೀಡದೆ ಗುತ್ತಿಗೆ ಆಧಾರದಲ್ಲಿ ಸೇವೆ ಪಡೆಯಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು ಸೇವೆ ನೀಡಿದರೂ ಸರ್ಕಾರ ಇವರ ಬಗ್ಗೆ ಗಮನ ಹರಿಸುತ್ತಿಲ್ಲ ಎಂಬ ಆರೋಪವಿದೆ.
ಭಾರತೀಯ ವೈದ್ಯ ಪರಂಪರೆ ಪದ್ಧತಿ ಮುನ್ನೆಲೆಗೆ ತರುವುದು ಹಾಗೂ ಹಿಂದುಳಿದ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವ ಉದ್ದೇಶದೊಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಅಸ್ತಿತ್ವಕ್ಕೆ ಬಂದ ಎನ್​ಎಚ್​ಎಂ ಯೋಜನೆಯಡಿ ಗುತ್ತಿಗೆ ಆಧಾರದಲ್ಲಿ ಆಯುಷ್ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಯಿತು. ಇವರು ಆರೋಗ್ಯ ಕೇಂದ್ರಗಳಲ್ಲಿ ಆಯುರ್ವೆದ, ಯೋಗ, ಯುನಾನಿ, ಸಿದ್ಧ ಔಷಧ ಮತ್ತು ಹೋಮಿಯೋಪತಿ ಪದ್ಧತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಅಲೋಪತಿ ವೈದ್ಯರಿಗೆ ಸರಿಸಮನಾಗಿ ರೋಗಿಗಳಿಗೆ ಸೇವೆ ನೀಡುತ್ತಿದ್ದಾರೆ. ಆದರೂ ಸೂಕ್ತ ವೇತನ ನೀಡುತ್ತಿಲ್ಲ. ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಅಲೋಪತಿ (ಎಂಬಿಬಿಎಸ್) ವೈದ್ಯರಿಗೆ ತಿಂಗಳಿಗೆ 45 ಸಾವಿರ ವೇತನದ ಜತೆಗೆ ಸರ್ಕಾರದ ಎಲ್ಲ ಸೇವಾ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅದೇ ರೀತಿ ಆಯುಷ್ ಇಲಾಖೆಯಡಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಆಯುಷ್ ವೈದ್ಯರಿಗೂ ಮಾಸಿಕ 45 ಸಾವಿರ ವೇತನ ನೀಡುತ್ತಿದೆ. ಆದರೆ ಎನ್​ಎಚ್​ಎಂ ಅಡಿಯಲ್ಲಿ ಸೇವೆ ನೀಡುತ್ತಿರುವ ಆಯುಷ್ ವೈದ್ಯರಿಗೆ ಮಾತ್ರ ಕನಿಷ್ಠ ವೇತನವನ್ನೂ ನೀಡದೆ ಕೇವಲ 21 ಸಾವಿರ ರೂ. ನೀಡಲಾಗುತ್ತಿದೆ. ಈ ಮಲತಾಯಿ ಧೋರಣೆಯನ್ನು ಸರ್ಕಾರ ಕೈಬಿಡಬೇಕು ಎಂದು ಎನ್​ಎಚ್​ಎಂ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಆಯುಷ್ ವೈದ್ಯರು ಆಗ್ರಹಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳ ಮಸೂದೆ:ಕರ್ನಾಟಕ ಖಾಸಗಿ ಆಸ್ಪತ್ರೆಗಳ ಮಸೂದೆ ಅನ್ವಯ ಹಾಗೂ ಕಾರ್ವಿುಕ ಇಲಾಖೆಯ ನಿಯಮ ಮತ್ತು ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಆದರೆ ಕಳೆದ 16 ವರ್ಷಗಳಿಂದ ಕನಿಷ್ಠ ವೇತನದಿಂದಲೂ ವಂಚಿತರಾಗಿ ಆಯುಷ್ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸಿ ತಿಂಗಳುಗಳೇ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ಆರೋಗ್ಯ ಇಲಾಖೆಯಲ್ಲಿ ಎನ್​ಎಚ್​ಎಂ ಅಡಿಯಲ್ಲಿ ಸೇವೆ ನೀಡುತ್ತಿರುವ ಆಯುಷ್ ವೈದ್ಯರಿಗೂ ಆಯುಷ್ ಇಲಾಖೆಯಲ್ಲಿ ಸೇವೆ ನೀಡುತ್ತಿರುವ ವೈದ್ಯರಿಗೂ ಸಮಾನ ವೇತನ ನೀಡಬೇಕು.
|ಡಾ. ರುದ್ರಗೌಡ ಪಾಟೀಲ್ಪ್ರಧಾನ ಕಾರ್ಯದರ್ಶಿ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಷ್ ವೈದ್ಯಾಧಿಕಾರಿಗಳ ಸಂಘ
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:eighteen − twelve =
Remember me
