ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಸೌಲಭ್ಯ ಪಡೆಯಲು ಗ್ರಾಮೀಣ ಪ್ರದೇಶಗಳಲ್ಲಿನ ಅರ್ಹ ಬಡ ಕುಟುಂಬಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಪೂಜಿ ಕೇಂದ್ರಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಾಗಿ 10 ರೂ. ಮಾತ್ರ ಪಾವತಿಸಿ ರಶೀದಿ ಪಡೆದುಕೊಳ್ಳಬಹುದು.
ರಾಜ್ಯದಲ್ಲಿನ 1.32 ಕೋಟಿ ಕುಟುಂಬಗಳಲ್ಲಿನ 4.50 ಕೋಟಿ ಜನರು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ವ್ಯಾಪ್ತಿಗೆ ಬರುತ್ತಾರೆ. ಅದರಲ್ಲಿ 1.15 ಕೋಟಿ ಬಿಪಿಎಲ್, 10.90 ಲಕ್ಷ ಅಂತ್ಯೋದಯ ಕಾರ್ಡ್ ಹೊಂದಿದ್ದಾರೆ. ಅದರಲ್ಲಿ ಸುಮಾರು 1.30 ಕೋಟಿ ರೂ. ಜನರು ಮಾತ್ರ ಆರೋಗ್ಯ ಸೌಲಭ್ಯ ಕಾರ್ಡ್ ಪಡೆದುಕೊಂಡಿದ್ದಾರೆ. ಆದರೆ, ಮಾಹಿತಿ ಕೊರತೆ, ದಾಖಲೆ ಸಮಸ್ಯೆ ಇನ್ನಿತರ ಕಾರಣಗಳಿಂದಾಗಿ ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರ ಪೈಕಿ ಶೇ.58 ಜನರಿಗೆ ಕಾರ್ಡ್ ಸಿಕ್ಕಿಲ್ಲ. ಕೆಲವೆಡೆ ಗ್ರಾಮೀಣ ಮಟ್ಟದಲ್ಲಿ ಸೌಲಭ್ಯ ಸಿಗದಿರುವ ಹಿನ್ನೆಲೆಯಲ್ಲಿ ಪಟ್ಟಣಕ್ಕೆ ಹೋಗಿ ಕಾರ್ಡ್ ಮಾಡಿಕೊಳ್ಳಲು ಸಾಧ್ಯವಾಗದೆ ಕೂಲಿ ಕಾರ್ವಿುಕರು ಕಾರ್ಡ್ ಮಾಡಿಸಿಕೊಂಡಿಲ್ಲ. ಅಂಥವರಿಗೆ ಬಾಪೂಜಿ ಕೇಂದ್ರ ಸಹಾಯಕವಾಗಲಿದೆ.
ಸರ್ವರ್ ಸಮಸ್ಯೆ ಇಲ್ಲ: ಜಿಲ್ಲೆ, ತಾಲೂಕು ಹಾಗೂ ಸಮುದಾಯ ಕೇಂದ್ರಗಳು, ಕರ್ನಾಟಕ ಒನ್ ಕೇಂದ್ರಗಳಲ್ಲಿನ ಸಿಬ್ಬಂದಿ ಸರ್ವರ್ ಸಮಸ್ಯೆ ಇನ್ನಿತರ ಕಾರಣಗಳಿಂದ ಸಮಯಕ್ಕೆ ಸರಿಯಾಗಿ
ಕಾರ್ಡ್ ವಿತರಣೆ ಮಾಡುತ್ತಿಲ್ಲ. ಕೆಲವು ಕಡೆ ಖಾಸಗಿ ಏಜೆನ್ಸಿಗಳು ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ದೂರು ಬರುತ್ತಿವೆ. ಹಾಗಾಗಿ ಗ್ರಾಪಂಗಳಲ್ಲಿ ಈ ಸೌಲಭ್ಯ ಅಳವಡಿಸುವುದರಿಂದ ಸರ್ವರ್ ಸಮಸ್ಯೆ ಉಂಟಾಗುವುದಿಲ್ಲ. ಜತೆಗೆ ಸ್ಥಳೀಯ ಮಟ್ಟದ ಜನರಿಗೆ ಅನನುಕೂಲವಾಗಲಿದೆ ಎಂದು ಜಿಪಂ ಅಧಿಕಾರಿಗಳು ತಿಳಿಸಿದ್ದಾರೆ.
ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆ ಕಾರ್ಡ್​ಗಾಗಿ ಅರ್ಹ ಬಡ ಕುಟುಂಬಗಳ ಅಲೆದಾಟ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿಯೊಬ್ಬರಿಗೂ ಯೋಜನೆಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಪಂಗಳಲ್ಲಿರುವ ಬಾಪೂಜಿ ಕೇಂದ್ರಗಳ ಮೂಲಕ ಕಾರ್ಡ್ ವಿತರಿಸಲಾಗುತ್ತಿದೆ.
| ಡಾ.ಕೆ.ವಿ.ರಾಜೇಂದ್ರಜಿಪಂ ಸಿಇಒ
| ಮಂಜುನಾಥ ಕೋಳಿಗುಡ್ಡ,  ಬೆಳಗಾವಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
