ಬೆಂಗಳೂರು2023-24ನೇ ಸಾಲಿನ ಬಿ.ಇಡಿ ಕೋರ್ಸ್‌ಗೆ ಪ್ರವೇಶ ಪಡೆಯುತ್ತಿರುವ ಅಭ್ಯರ್ಥಿಗಳು ಆದ್ಯತೆ ಮೇರೆಗೆ ಕಾಲೇಜುಗಳನ್ನು ಬದಲಾವಣೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಅವಕಾಶ ನೀಡಿದೆ.
ಡಿ.22ರಿಂದ 24ರ ಸಂಜೆ 6 ಗಂಟೆಯವರೆಗೆ ಸಮಯ ನೀಡಿದ್ದು, ಅಭ್ಯರ್ಥಿಗಳು ಆನ್‌ಲೈನ್ ಲಾಗಿನ್ ಆಗಿ ಕಾಲೇಜುಗಳ ಹೆಸರುಗಳನ್ನು ಬದಲಾವಣೆ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.ಬಿ.ಇಡಿ ಪ್ರವೇಶಕ್ಕೆ ಸಂಬಂಧಿಸಿದಂತೆ ಡಿ.14ರಂದು ಪ್ರಕಟಿಸಿರುವ ರೋಸ್ಟರ್ ಮತ್ತು ಮೆರಿಟ್ ಅನ್ವಯ 1:2 ಅನುಪಾತ ಪಟ್ಟಿಯಲ್ಲಿನ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನಾ ಪ್ರಕ್ರಿಯೆಯನ್ನು ನೋಡಲ್ ಕೇಂದ್ರದಲ್ಲಿ ನಡೆಸಲಾಗಿದೆ. ಈ ಅಭ್ಯರ್ಥಿಗಳು ಕಾಲೇಜು ಬದಲಾವಣೆಗೆ ಅರ್ಹರಿರುತ್ತಾರೆ ಎಂದು ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್‌ಸೈಟ್ www.schooleducation.karnataka.gov.in ಗೆ ಭೇಟಿ ನೀಡಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
