ಬೆಂಗಳೂರು:ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಜೆಡಿಎಸ್​ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಚ್​.ಚಂದ್ರಶೇಖರ್​ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
‘ನಿಮಗೆ ಜೆಡಿಎಸ್​ ಪಕ್ಷವು ರಾಜ್ಯಮಟ್ಟದಲ್ಲಿ ಹಲವು ಅವಕಾಶ ಕಲ್ಪಿಸಿದೆ. ಪಕ್ಷದಿಂದ ಸಾಕಷ್ಟು ಅನುಕೂಲ ಪಡೆದಿದ್ದರೂ ಈ ಸ್ಥಾನಗಳನ್ನು ದುರುಪಯೋಗ ಪಡಿಸಿಕೊಂಡು ನಿರಂತರವಾಗಿ ಪಕ್ಷ ಹಾಗೂ ಪಕ್ಷದ ವರಿಷ್ಠರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಾ ಪಕ್ಷ ವಿರೋಧಿ ಚಟುವಟಿಕೆ ನಡೆಸಿಕೊಂಡು ಬಂದಿದ್ದೀರಿ. ಹಾಗಾಗಿ ನಿಮ್ಮನ್ನು ಪಕ್ಷದಿಂದ 6 ವರ್ಷ ಕಾಲ ಉಚ್ಛಾಟನೆ ಮಾಡಲಾಗಿದೆ’ ಜೆಡಿಎಸ್​ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಆರ್​. ಪ್ರಕಾಶ್​, ಆದೇಶ ಮೂಲಕ ಚಂದ್ರಶೇಖರ್​ಗೆ ತಿಳಿಸಿದ್ದಾರೆ.
ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡರ ಸೂಚನೆ ಹಿನ್ನೆಲೆ ಚಂದ್ರಶೇಖರ್​ರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಇದರ ಬೆನ್ನಲ್ಲೇ ಸೋಮವಾರ ಮಧ್ಯಾಹ್ನ ಬಿ.ಎಚ್​.ಚಂದ್ರಶೇಖರ್​ ಕಾಂಗ್ರೆಸ್​ ಸೇರ್ಪಡೆಗೊಂಡಿದ್ದಾರೆ.
ಆರ್​ಆರ್​ ನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣಾ ಸಮರ ಜೋರಾಗಿದ್ದು, ಪಕ್ಷಾಂತರ ಪರ್ವ ಕೂಡ ಬಿರುಸುಗೊಂಡಿದೆ. ಜೆಡಿಎಸ್​ನಿಂದ ಹೊರ ಹೋಗುವವರಿಗೆ ಶಾಲು-ಹಾರ ಹಾಕಿ ಇತ್ತೀಚಿಗಷ್ಟೇ ಮಾಜಿ ಸಿಎಂಎಚ್​.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದರು. ಇದೀಗ ಚಂದ್ರಶೇಖರ್​ ಕಾಂಗ್ರೆಸ್​ ಸೇರ್ಪಡೆ ಆಗಲಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಅವರನ್ನು ಪಕ್ಷದಿಂದಲೇ ಉಚ್ಛಾಟಿಸಲಾಗಿದೆ.
ಕಪಾಲಬೆಟ್ಟದಲ್ಲಿ ಕಾಮಗಾರಿ ನಡೆಸದಂತೆ ಹೈಕೋರ್ಟ್​ ತಡೆಯಾಜ್ಞೆ

ಆರ್​ಆರ್​ ನಗರ ಬೈ ಎಲೆಕ್ಷನ್​: ಮೂರು ಪಕ್ಷಗಳ ಅಭ್ಯರ್ಥಿ ಬೆನ್ನಿಗೆ ನಿಂತಿದ್ದಾರೆ ಆ ನಾಯಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − four =
Remember me
