ಬೆಂಗಳೂರು:ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಉಳಿದೆಲ್ಲ ನಗರ-ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅಕ್ರಮ ಬಡಾವಣೆಗಳಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣ ಮಾಡಿದ ಕಟ್ಟಡಗಳನ್ನು ಬಿ ಖಾತೆಯನ್ನಾಗಿ ಪರಿಗಣಿಸಿ ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಉಪಸಮಿತಿ ಸಮ್ಮತಿಸಿದೆ.
ಬಿಬಿಎಂಪಿ ಕಾಯ್ದೆ 2020ರ ಕಲಂ 144(6) ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳಿಗೆ /ನಗರ-ಸ್ಥಳೀಯ ಸಂಸ್ಥೆಗಳಿಗೆ ಸಹ ವಿಸ್ತರಣೆ ಮಾಡುವ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತ ಸಾಧಕ-ಬಾಧಕ ಪರಿಶೀಲಿಸಲು ಸೂಕ್ತ ತೀರ್ಮಾನ ಕೈಗೊಳ್ಳುವ ಸಲುವಾಗಿ ರಚಿಸಲಾಗಿರುವ ಉಪಸಮಿತಿಯ ಸಭೆ ಗುರುವಾರ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆಯಿತು.
ಕಟ್ಟಡಗಳ ಮಾಲೀಕರು ಮೂಲಭೂತ ಸೌಲಭ್ಯ ಪಡೆಯುತ್ತಿರುವ ಹಿನ್ನೆಲೆಯಲ್ಲಿ ನಿರ್ವಹಣಾ ಶುಲ್ಕ ವಿಧಿಸುವ ಕುರಿತಂತೆ ಸಭೆಯಲ್ಲಿ ರ್ಚಚಿಸಲಾಯಿತು. ಮುಂದಿನ ಗುರುವಾರ ಮತ್ತೆ ಸಭೆ ಸೇರಿ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಯಿತು. ಒಂದು ವಾರದೊಳಗೆ ಅನಧಿಕೃತ ಕಟ್ಟಡಗಳಿಗೆ ನಿರ್ವಹಣಾ ಶುಲ್ಕ ರೂಪದಲ್ಲಿ ತೆರಿಗೆ ವಿಧಿಸುವುದು, ಬಡಾವಣೆಯ ಮಂಜೂರಾತಿ, ನಕ್ಷೆ ಮಂಜೂರಾತಿ ಪ್ರಕ್ರಿಯೆ ಸರಳೀಕರಿಸುವುದು, ನಕ್ಷೆ ಉಲ್ಲಂಘಿಸಿ ಅಥವಾ ನಕ್ಷೆ ಮಂಜೂರಾತಿಯೇ ಇಲ್ಲದ ಕಟ್ಟಡ ನಿರ್ವಣಕ್ಕೆ ಕಡಿವಾಣ ಹಾಕುವ ಕುರಿತಂತೆ ಕರಡು ಸಿದ್ಧಪಡಿಸಿ ಮುಂದಿನ ಸಭೆಯಲ್ಲಿ ಮಂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಪ್ರಸ್ತುತ ನಗರ-ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 54.91 ಲಕ್ಷಕ್ಕೂ ಹೆಚ್ಚು ಆಸ್ತಿಗಳ ಪೈಕಿ 20.55 ಲಕ್ಷ ಮಾತ್ರ ಅಧಿಕೃತ ಆಸ್ತಿಗಳು ತೆರಿಗೆ ಪಾವತಿಸುತ್ತಿದ್ದರೆ, ಅನಧಿಕೃತವಾದ 34.35ಲಕ್ಷಕ್ಕೂ ಅಧಿಕ ಆಸ್ತಿಗಳಿಗೆ ಯಾವುದೇ ತೆರಿಗೆ ವಿಧಿಸಲಾಗುತ್ತಿಲ್ಲ. ಆದರೆ, ಆ ಎಲ್ಲ ಸ್ವತ್ತಿಗೂ ನೀರು, ರಸ್ತೆ, ವಿದ್ಯುತ್, ಬೀದಿ ದೀಪ, ಕಸ ವಿಲೇವಾರಿ ಸೇರಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಆಸ್ತಿ ತೆರಿಗೆ ಸಂಗ್ರಹಣೆಯೇ ಮಾರ್ಗವಾಗಿದ್ದು, ಇಂತಹ ಅನಧಿಕೃತ ಕಟ್ಟಡಗಳಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ವಹಿಯಲ್ಲಿ ಖಾತೆ ನೀಡಿ ಆಸ್ತಿ ತೆರಿಗೆ ಸಂಗ್ರಹಿಸುವ ರೀತಿಯಲ್ಲೇ ದಂಡ ಸಹಿತ ಕಟ್ಟಡ ಕಂದಾಯ ಸಂಗ್ರಹಿಸಲು ಶಿಫಾರಸು ಮಾಡುವುದು ಈ ಉಪಸಮಿತಿ ಜವಾಬ್ದಾರಿಯಾಗಿದೆ ಎಂದರು.
ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಕಾನೂನು ಬದ್ಧ ಮಾರ್ಗದಲ್ಲಿ ನಿವೇಶನ ಲಭಿಸಿದರೆ, ನಕ್ಷೆ ಮಂಜೂರಾತಿ ಪ್ರಕ್ರಿಯೆ ಸರಳವಾದರೆ ಅಕ್ರಮ ಬಡಾವಣೆ, ಕಟ್ಟಡ ನಿರ್ಮಾಣ ತಡೆಯಲು ಸಾಧ್ಯ. ಇನ್ಮುಂದೆ ಅನಧಿಕೃತ ಬಡಾವಣೆ ತಲೆ ಎತ್ತದಂತೆ ತಡೆಯಲು ಆರ್​ಟಿಸಿಯ 11ನೇ ಕಾಲಂನಲ್ಲಿ ಅಕ್ರಮ ಬಡಾವಣೆ ಎಂದು ನಮೂದಿಸಿದರೆ, ಅದು ಉಪ ನೋಂದಣಾಧಿಕಾರಿಗಳ ಕಾವೇರಿ ತಂತ್ರಾಂಶದಲ್ಲಿ ನೇರ ಸಂರ್ಪತವಾಗುವಂತೆ ಮಾಡಿದರೆ ಇಂತಹ ಅಕ್ರಮ ಬಡಾವಣೆ ನಿವೇಶನಗಳ ಮಾರಾಟ ತಡೆಯಬಹುದು ಎಂದು ಸಲಹೆ ಮಾಡಿದರು.
ಕಾನೂನು ಸಚಿವ ಎಚ್.ಕೆ.ಪಾಟೀಲ ಮಾತನಾಡಿ, ಇ ಖಾತಾ ಆಧಾರದ ಮೇಲೆ ಮಾತ್ರ ನೋಂದಣಿ ಆಗಬೇಕು. ತಮ್ಮ ನಿವೇಶನಕ್ಕಿಂತ ಹೆಚ್ಚಿನ ಅಳತೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿ ಯಾರೇ ಕಟ್ಟಡ ನಿರ್ವಿುಸಿದ್ದರೆ ಖಾತೆಯಲ್ಲಿ ಮಾಲೀಕರ ಹೆಸರು ಮತ್ತು ಸರ್ಕಾರ ಎಂದು ನಮೂದಾಗುವಂತೆ ಮಾಡಬೇಕು. ಬಡವರು, ದಲಿತರು, ದುರ್ಬಲರು ಕಟ್ಟಿರುವ ಮನೆಗಳ ವಿಚಾರದಲ್ಲಿ ತೆರಿಗೆ ವಿಧಿಸುವಾಗ ಮಾನವೀಯತೆಯನ್ನೂ ತೋರಬೇಕು ಎಂಬ ಸಲಹೆ ನೀಡಿದರು. ಸಚಿವ ರಹೀಂಖಾನ್, ಹಿರಿಯ ಅಧಿಕಾರಿಗಳಾದ ಅಜಯ್ ನಾಗಭೂಷಣ್, ಮುನೀಶ್ ಮೌದ್ಗಿಲ್, ನಿತೇಶ್ ಇತರರು ಇದ್ದರು.
ಸ್ಥಳೀಯ ಸಂಸ್ಥೆಗಳ ಮೇಲಿರುವ ಹೊರೆ:ಸ್ವಚ್ಛ ಭಾರತ ಮಿಷನ್​ಗೆ ವಂತಿಕೆ 708.76 ಕೋಟಿ ರೂ., ಅಮೃತ್ 1.0ಗೆ 142.20 ಕೋಟಿ ರೂ., ಅಮೃತ್ 2.0ಗೆ ವಂತಿಗೆ 923 ಕೋಟಿ ರೂ., ಕೆಯುಐಡಿಪಿಸಿ ಸಾಲ 3255.07 ಕೋಟಿ ರೂ. ಹಾಗೂ ಕೆಯುಡಬ್ಲ್ಯುಎಸ್ ಮತ್ತು ಡಿಬಿ ಸಾಲ 503.30 ಕೋಟಿ ರೂ.
ಅಕ್ರಮ-ಸಕ್ರಮ ಯೋಜನೆ ಜಾರಿ ಮಾಡಲು ಪ್ರಸಕ್ತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ಇದು ಸುಪ್ರೀಂಕೋಟ್​ನಲ್ಲಿದೆ. ಇನ್ಮುಂದೆ ಅಕ್ರಮ ಕಟ್ಟಡ ನಿರ್ವಣಕ್ಕೆ ಆಸ್ಪದ ನೀಡುವುದಿಲ್ಲ. ಈಗಾಗಲೆ ಹತ್ತಾರು ವರ್ಷಗಳಿಂದ ನಿರ್ವಿುಸಿಕೊಂಡು ವಾಸ ಮಾಡುತ್ತಿರುವ ಮನೆಗಳಿಗೆ ದಂಡ ವಿಧಿಸಿ ಸಕ್ರಮಗೊಳಿಸುವ ಕುರಿತಂತೆ ಸುಪ್ರೀಂಕೋರ್ಟ್​ಗೆ ಮನವರಿಕೆ ಮಾಡಿಸುವ ಪ್ರಯತ್ನ ಮಾಡಬೇಕು ಎಂದು ಸಭೆಯಲ್ಲಿ ರ್ಚಚಿಸಲಾಯಿತು. 2011ರ ಜನಗಣತಿಯಂತೆ ರಾಜ್ಯದಲ್ಲಿ ಸುಮಾರು 6.11 ಕೋಟಿ ಜನಸಂಖ್ಯೆ ಇದ್ದು, ಈ ಪೈಕಿ ಶೇ.39 ಜನರು ನಗರ ಪ್ರದೇಶದಲ್ಲಿ ವಾಸ ಮಾಡುತ್ತಾರೆ. ಕಳೆದ 12 ವರ್ಷದಲ್ಲಿ ಈ ಸಂಖ್ಯೆ ಇನ್ನೂ ಹೆಚ್ಚಳವಾಗಿದೆ. ನಗರ ಪಾಲಿಕೆ, ನಗರಸಭೆ, ಪುರಸಭೆಗಳಿಗೆ ಈ ಎಲ್ಲ ವಸತಿ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸುವುದು ಸವಾಲಾಗಿದ್ದು, ಅವುಗಳಿಗೆ ಆರ್ಥಿಕ ಬಲ ನೀಡಲು ಅನಧಿಕೃತ ಕಟ್ಟಡಗಳಿಗೂ ನಿರ್ವಹಣಾ ಶುಲ್ಕ ವಿಧಿಸುವ ಅಗತ್ಯವನ್ನು ಸಭೆಯಲ್ಲಿದ್ದವರು ಪ್ರತಿಪಾದಿಸಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
