ಬೆಂಗಳೂರು:ಕರ್ನಾಟಕ ಚಿತ್ರಕಲಾ ಪರಿಷತ್ತಿನ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಭಾನುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಪುನರಾಯ್ಕೆಯಾದರು. ಇದರಿಂದ 4 ಬಾರಿ ಅಧ್ಯಕ್ಷರ ಹುದ್ದೆಗೆ ಏರಿದ ಹೆಗ್ಗಳಿಕೆಗೆ ಇವರು ಪಾತ್ರರಾದರು.
ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ, ಟಿ.ಪ್ರಭಾಕರ್, ಎ.ರಾಮಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಎನ್. ಶಶಿಧರ್, ಸಹಾಯಕ ಕಾರ್ಯದರ್ಶಿಯಾಗಿ ಟಿ. ಚಂದ್ರಶೇಖರ್, ಬಿ.ಎಲ್. ಶ್ರೀನಿವಾಸ್, ಖಜಾಂಚಿಯಾಗಿ ಡಾ.ಎನ್. ಲಕ್ಷ್ಮೀಪತಿ ಬಾಬು ಆಯ್ಕೆಯಾದರೆ, ಟಿ.ವಿ. ತಾರಕೇಶ್ವರಿ, ಆರ್.ಜಿ. ಭಂಡಾರಿ, ಸಿ.ಪಿ. ಉಷಾರಾಣಿ, ಬಿ.ವೈ. ವಿನೋದ, ಸುಬ್ರಹ್ಮಣ್ಯ ಕುಕ್ಕೆ, ಎಸ್. ಅಮೃತ ವಿಮಲನಾಥನ್ ಮತ್ತು ಪಿ.ದಿನೇಶ್ ಮಗರ್ ಕಾರ್ಯಕಾರಿ ಸಮಿತಿಗೆ ಸದಸ್ಯರಗಳಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿಗಳು ಘೋಷಿಸಿದರು.
ಅಧ್ಯಕ್ಷ ಸ್ಥಾನಕ್ಕೆ ಬಿ.ಎಲ್.ಶಂಕರ್ ಮತ್ತು ಶಿಕ್ಷಣ ತಜ್ಞ ಪ್ರೊ.ಕೆ.ಇ. ರಾಧಾಕೃಷ್ಣ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ಶಂಕರ್ ಗೆಲುವಿನ ನಗೆ ಬೀರಿದರು. 208 ಮಂದಿ ಮತದಾನದ ಹಕ್ಕು ಹೊಂದಿದ್ದರು. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಮತದಾನ ನಡೆಯಿತು.

ಇಲ್ಲಿ ಸದ್ಯಕ್ಕೆ ಪಾನಿಪುರಿ ಮಾರಾಟ ನಿಷೇಧ: ಕಾರಣ ಮತ್ತೇನೂ ಅಲ್ಲ, ಇದು..

ಭ್ರಷ್ಟಾಚಾರದ ಆರೋಪದಲ್ಲಿ ಬಂಧಿತ ಐಎಎಸ್ ಅಧಿಕಾರಿಯ ಪುತ್ರ ಗುಂಡಿಟ್ಟುಕೊಂಡು ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − seven =
Remember me
